Breaking News

ಒಂದೇ ದಿನ 24 ಗಂಟೆಯಲ್ಲಿ 1,647 ಮಂದಿಗೆ ಕೊರೋನಾ ವೈರಸ್​ ಬಂದಿದೆ. ಈ ಮೂಲಕ ದೆಹಲಿಯಲ್ಲಿ

Spread the love

 ದೆಹಲಿಯಲ್ಲಿ ಮಾರಕ ಕೊರೋನಾ ವೈರಸ್​ ಆರ್ಭಟ ಮುಂದುವರಿದದೆ. ಸೋಮವಾರ ಒಂದೇ ದಿನ 24 ಗಂಟೆಯಲ್ಲಿ 1,647 ಮಂದಿಗೆ ಕೊರೋನಾ ವೈರಸ್​ ಬಂದಿದೆ. ಈ ಮೂಲಕ ದೆಹಲಿಯಲ್ಲಿ ಕೋವಿಡ್​​-19 ಸೋಂಕಿತರ ಸಂಖ್ಯೆ 42,829ಕ್ಕೆ ಏರಿಕೆಯಾಗಿದೆ ಎಂದು ಸಿಎಂ ಅರವಿಂದ್​ ಕೇಜ್ರಿವಾಲ್​ ನೇತೃತ್ವದ ಆಪ್​ ಸರ್ಕಾರ ಬಿಡುಗಡೆ ಮಾಡಿದ ಹೆಲ್ತ್​​ ಬುಲೆಟಿನ್​​ನಿಂದ ತಿಳಿದು ಬಂದಿದೆ.

ಇನ್ನು, ಮಹಾಮಾರಿ ಕೋವಿಡ್​​-19 ಸೋಂಕು ನಿನ್ನೆಯೂ 73 ಮಂದಿಯನ್ನು ಬಲಿ ತೆಗೆದುಕೊಂಡಿದೆ. ಈ ಮೂಲಕ ಕೊರೋನಾ ವೈರಸ್​ನಿಂದ ದೆಹಲಿಯಲ್ಲಿ ಮೃತರಾದವರ ಸಂಖ್ಯೆ 1,400ಕ್ಕೆ ಏರಿಕೆಯಾಗಿದೆ.

ಎರಡು ದಿನದ ಹಿಂದೆ ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಾಗುತ್ತಿರುವ ಕೊರೋನಾ ವೈರಸ್ ಪ್ರಕರಣಗಳ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಭೆ ನಡೆಸಿ ಚರ್ಚೆ ನಡೆಸಿದರು.

ಇದನ್ನೂ ಓದಿ: ಕೋಲಾರ ಜಿ.ಪಂ​​ ಸ್ಥಾಯಿ ಸಮಿತಿ ಚುನಾವಣೆ: ಅಧಿಕಾರಕ್ಕಾಗಿ ಕಾಂಗ್ರೆಸ್​​, ಬಿಜೆಪಿ, ಜೆಡಿಎಸ್​​ ಹೊಂದಾಣಿಕೆ

ದೆಹಲಿ ಆಸ್ಪತ್ರೆಗಳ ವ್ಯವಸ್ಥೆಯ ಕುರಿತು ಸುಪ್ರೀಂಕೋರ್ಟ್ ಚಾಟಿ ಬೀಸಿದ ಬೆನ್ನಲ್ಲೇ ಈ ಸಭೆ ನಡೆಯಿತು. ಸಭೆಯಲ್ಲಿ ಕೊರೋನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿತ್ತು.

ಕೊರೋನಾ ವೈರಸ್ ತಡೆಗಟ್ಟುವುದು ಮತ್ತು ಆಸ್ಪತ್ರೆಗಳಲ್ಲಿ ಚಿಕಿತ್ಸಾ ವೇಗವನ್ನು ಹೆಚ್ಚಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಜತೆಗೆ ದೆಹಲಿಯಲ್ಲಿ ಕೋವಿಡ್-19 ರೋಗಿಗಳಿಗಾಗಿಯೇ ವಿಶೇಷ ಆಸ್ಪತ್ರೆ ಕಟ್ಟುವ ಕುರಿತು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ