ನವದೆಹಲಿ, ಮೇ 12- ಲಾಕ್‍ಡೌನ್ ಸಂಕಷ್ಟದಲ್ಲಿರುವ ಜನರ ಅನುಕೂಲಕ್ಕಾಗಿ ಇಂದಿನಿಂದ ದೇಶದ ವಿವಿಧ ಭಾಗಗಳಿಗೆ 15 ವಿಶೇಷ ರೈಲುಗಳ ಸಂಚಾರ ಆರಂಭವಾಗಿದೆ.
ನಿನ್ನೆ ಸಂಜೆ 6 ಗಂಟೆಯಿಂದ ರೈಲ್ವೆ ಟಿಕೆಟ್ ಬುಕ್ಕಿಂಗ್ ಆರಂಭವಾಗಿದ್ದು, ಇಂದು ಬೆಳಗ್ಗೆವರೆಗೆ 80 ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಿಕೊಂಡಿದ್ದಾರೆ.
16.15 ಕೋಟಿ ರೂ. ಮೌಲ್ಯದ 45,533 ರೈಲ್ವೆ ಟಿಕೆಟ್‍ಗಳು ಬುಕ್ಕಿಂಗ್ ಆಗಿವೆ ಎಂದು ಭಾರತೀಯ ರೈಲ್ವೆ ಪ್ರಕಟಣೆ ತಿಳಿಸಿದೆ. ಐದು ವಿಶೇಷ ರೈಲುಗಳಲ್ಲಿ ಮೊದಲ ರೈಲು ಇಂದು ಬೆಳಗ್ಗೆ ರಾಜಧಾನಿ ದೆಹಲಿಯಿಂದ ವಿಲಾಸ್‍ಪುರ್‍ಗೆ ಪ್ರಯಾಣ ಬೆಳೆಸಿಯಿತು.
ಮುಂದಿನ 7 ದಿನಗಳ ಕಾಲ ರೈಲ್ವೆ ಬುಕ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ಸುಮಾರು ಒಂದೂವರೆ ತಿಂಗಳ ಬಳಿಕ ರೈಲ್ವೆಗೆ ಸಂಪನ್ಮೂಲ ಕ್ರೋಢೀಕರಣವಾಗುತ್ತಿದೆ.
Laxmi News 24×7