Breaking News
Home / ಅಂತರಾಷ್ಟ್ರೀಯ / ಆಸೀಸ್‍ಗೆ ನಂ.1 ರ‍್ಯಾಂಕ್ ಹೇಗೆ ಕೊಟ್ರಿ?- ಐಸಿಸಿ ವಿರುದ್ಧ ಗೌತಮ್ ಗಂಭೀರ್ ಕಿಡಿ….

ಆಸೀಸ್‍ಗೆ ನಂ.1 ರ‍್ಯಾಂಕ್ ಹೇಗೆ ಕೊಟ್ರಿ?- ಐಸಿಸಿ ವಿರುದ್ಧ ಗೌತಮ್ ಗಂಭೀರ್ ಕಿಡಿ….

Spread the love

ನವದೆಹಲಿ: ಇತ್ತೀಚೆಗೆ ಆಸ್ಟ್ರೇಲಿಯಾ ತಂಡ ಐಸಿಸಿ ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಟೀಂ ಇಂಡಿಯಾವನ್ನು ಹಿಂದಿಕ್ಕಿ ಟಾಪ್ ಸ್ಥಾನವನ್ನು ಪಡೆದುಕೊಂಡಿತ್ತು. ಐಸಿಸಿಯ ಸದಸ್ಯ ರಾಷ್ಟ್ರಗಳ ತಂಡಗಳ ಪ್ರದರ್ಶನದ ಆಧಾರದ ಮೇಲೆ ಶ್ರೇಯಾಂಕ ಪಟ್ಟಿಯಲ್ಲಿ ಆಸೀಸ್ ಮೊದಲ ಸ್ಥಾನ ಪಡೆದಿತ್ತು. ಪರಿಣಾಮ 2016 ಅಕ್ಟೋಬರ್ ನಿಂದ ಸತತ 42 ತಿಂಗಳು ನಂ.1 ಟೆಸ್ಟ್ ಶ್ರೇಯಾಂಕ ಸ್ಥಾನದಲ್ಲಿದ್ದ ಟೀಂ ಇಂಡಿಯಾ ತನ್ನ ರ‍್ಯಾಂಕಿಂಗ್ ಕಳೆದುಕೊಂಡಿತ್ತು. ಅಲ್ಲದೇ ಮೂರನೇ ಸ್ಥಾನಕ್ಕೆ ಇಳಿದಿತ್ತು.

ಈ ಕುರಿತಂತೆ ಟೀಂ ಮಾಜಿ ಆಟಗಾರ, ಸಂಸದ ಗೌತಮ್ ಗಂಭೀರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಯಾವ ಆಧಾರದ ಮೇಲೆ ಆಸ್ಟ್ರೇಲಿಯಾ ತಂಡಕ್ಕೆ ನಂ.1 ಸ್ಥಾನ ನೀಡಿದ್ದೀರಿ ಎಂದು ಪ್ರಶ್ನೆ ಮಾಡಿ ಶ್ರೇಯಾಂಕ ಪಟ್ಟಿಯ ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ.

ಸಾಕಷ್ಟು ಸಮಯದಿಂದ ಟೀಂ ಇಂಡಿಯಾ ನಿರಂತರವಾಗಿ ವಿಜಯಗಳನ್ನು ಪಡೆದುಕೊಳ್ಳುತ್ತಿದೆ. ಆದರೆ ಆಸೀಸ್ ಟಾಪ್ ಪಟ್ಟವನ್ನು ಹೇಗೆ ಪಡೆಯಿತು ಎಂದು ಅರ್ಥವಾಗುತ್ತಿಲ್ಲ. ಅಲ್ಲದೇ ಟೀಂ ಇಂಡಿಯಾ 3ನೇ ಸ್ಥಾನಕ್ಕೆ ಇಳಿದಿರುವುದು ಅಚ್ಚರಿ ತಂದಿದೆ. ಐಸಿಸಿ ನೀಡುವ ಅಂಕಗಳು, ಶ್ರೇಯಾಂಕ ವಿಧಾನ ಸರಿ ಇಲ್ಲ. ಪ್ರದರ್ಶನ ಆಧಾರದ ಮೇಲೆ ನೋಡುವುದಾದರೆ ಟೀಂ ಇಂಡಿಯಾ ಇಂದಿಗೂ ಮೊದಲ ಸ್ಥಾನದಲ್ಲಿರಬೇಕಾಗಿತ್ತು. ಟೆಸ್ಟ್ ಚಾಂಪಿಯನ್‍ಶಿಪ್ ಆರಂಭವಾದ ಬಳಿಕ ತವರು ನೆಲದಲ್ಲಿ ಹಾಗೂ ವಿದೇಶಿ ನೆಲದಲ್ಲಿ ಪಂದ್ಯ ಗೆದ್ದರು ಒಂದೇ ಅಂಕಗಳನ್ನು ನೀಡುವುದು ಸರಿಯಲ್ಲ. ವಿದೇಶದಲ್ಲಿ ಹಾಗೂ ತವರು ನೆಲದಲ್ಲಿಯೂ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡಿದೆ ಎಂದು ಗಂಭೀರ್ ಹೇಳಿದ್ದಾರೆ.

ಮೇ ತಿಂಗಳ ಮೊದಲ ವಾರದಲ್ಲಿ ಬಿಡುಗಡೆಯಾಗಿದ್ದ ಐಸಿಸಿ ಶ್ರೇಯಾಂಕ ಪಟ್ಟಿಯ ಅನ್ವಯ 116 ಅಂಕ ಪಡೆದಿದ್ದ ಆಸ್ಟ್ರೇಲಿಯಾ ತಂಡ ಮೊದಲ ಪಡೆದಿತ್ತು. ಆ ಬಳಿಕ 115 ಅಂಕ ಪಡೆದಿದ್ದ ನ್ಯೂಜಿಲೆಂಡ್, 114 ಅಂಕ ಪಡೆದಿದ್ದ ಟೀಂ ಇಂಡಿಯಾ ಕ್ರಮವಾಗಿ 2 ಮತ್ತು 3ನೇ ಸ್ಥಾನ ಪಡೆದಿವೆ. 2003 ರಲ್ಲಿ ಟೆಸ್ಟ್ ಶ್ರೇಯಾಂಕ ಪಟ್ಟಿಯನ್ನು ಆರಂಭಿಸಿದ ಬಳಿಕ ಮೊದಲ ಬಾರಿಗೆ ಕಡಿಮೆ ಅಂತರದಲ್ಲಿ ಟಾಪ್ ಮೂರು ತಂಡಗಳು ಸ್ಥಾನ ಪಡೆದಿವೆ. ಕೊಹ್ಲಿ ನಾಯಕತ್ವದ ತಂಡದ 2016-17ರಿಂದ ಉತ್ತಮ ಪ್ರದರ್ಶನ ನೀಡಿತ್ತಾ ನಂ.1 ಸ್ಥಾನದಲ್ಲಿ ಮುಂದುವರಿದಿತ್ತು. ಐಸಿಸಿ ನಿಯಮಗಳ ಅನ್ವಯ ಮೇ 2009 ರಿಂದ ಲಭಿಸಿದ ಫಲಿತಾಂಶಗಳ ಅನ್ವಯ ಆಸೀಸ್ ನಂ.1 ಪಟ್ಟ ಪಡೆದುಕೊಂಡಿದೆ. ಉಳಿದಂತೆ ಐಸಿಸಿ ಟೆಸ್ಟ್ ಚಾಂಪಿಯನ್‍ಶಿಪ್ ಪಟ್ಟಿಯಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ.


Spread the love

About Laxminews 24x7

Check Also

100 ರನ್​ಗಳಿಂದ ಗೆದ್ದ ಭಾರತ; ವಿಶ್ವಕಪ್​ನಿಂದ ಹೊರಬಿದ್ದ ಹಾಲಿ ಚಾಂಪಿಯನ್ …

Spread the loveಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಹೈವೋಲ್ಟೇಜ್ ವಿಶ್ವಕಪ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ