Breaking News

ಕೂಲಿ ಕಾರ್ಮಿಕರ ಮಗಳ ಹುಟ್ಟುಹಬ್ಬ ಆಚರಿಸಿದ ಪೊಲೀಸ್……..

Spread the love

ನವದೆಹಲಿ: ಹೆಮ್ಮಾರಿ ಕೊರೊನಾ ವೈರಸ್‍ನಿಂದಾಗಿ ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಏಕಾಏಕಿ ಲಾಕ್‍ಡೌನ್ ಜಾರಿಗೆ ಬಂದಿದೆ. ಇಂತಹ ಸಮಯದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರಿಂದ ಅನೇಕ ಹೃದಯ ಸ್ಪರ್ಶಿಸು ಪ್ರಸಂಗಗಳು ನಡೆದಿವೆ. ಅಂತೆ ಪೊಲೀಸರ ಪುಟ್ಟ ಸಹಾಯದಿಂದ ಶನಿವಾರ ಕೂಲಿ ಕಾರ್ಮಿಕರ ನಾಲ್ಕು ವರ್ಷದ ಬಾಲಕಿಯೊಬ್ಬಳು ತನ್ನ ಜನ್ಮದಿನವನ್ನು ಆಚರಿಸಿಕೊಳ್ಳಲು ಸಾಧ್ಯವಾಯಿತು.

ಫತೇಪುರಿ ಬೇರಿಯ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ತಮ್ಮದೆ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಫೋಟೋದಲ್ಲಿ ಬಾಲಕಿ ತನ್ನ ಮುಂದೆ ಕೇಕ್‍ನೊಂದಿಗೆ ಬರ್ತ್ ಡೇ ಟೋಪಿ ಧರಿಸಿರುವುದನ್ನು ಕಾಣಬಹುದು. ಬಾಲಕಿ ಕೇಕ್ ಕತ್ತರಿಸಿ ಖುಷಿ ವ್ಯಕ್ತಪಡಿಸಿದ್ದಾಳೆ.

ಬಾಲಕಿಯ ಈ ವರ್ಷದ ಬರ್ತ್ ಡೇ ಅತ್ಯಂತ ಸ್ಮರಣಿಯವಾಗಿತ್ತದೆ ಎಂದು ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ. ಬಾಲಕಿ ಚಂದನ್ ಹುಲ್ಲಾ ಗ್ರಾಮದ ನಿವಾಸಿ ಎಂಬ ಮಾಹಿತಿಯನ್ನು ದೆಹಲಿ ಪೊಲೀಸರು ನೀಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ