Breaking News

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹ: ಮತ್ತೆ ಉಪವಾಸ ಸತ್ಯಾಗ್ರಹಕ್ಕೆ ಕರೆ ಕೊಟ್ಟ ಬಸವ ಜಯಮೃತ್ಯುಂಜಯ ಸ್ವಾಮೀಜಿ

Spread the love

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಮತ್ತೆ ಹೋರಾಟಕ್ಕೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ.

ಡಿಸೆಂಬರ್ 2ರಿಂದ 11ರ ವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ವೇಳೆ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಡಿ.10ರಂದು ಬೆಳಗಾವಿಯಲ್ಲಿ 1 ದಿನದ ಉಪವಾಸ ಸತ್ಯಾಗ್ರಹಕ್ಕೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ.

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಲು ಆಗ್ರಹಿಸಿ ಹೋರಾಟದ ವೇಳೆ 2024ರಲ್ಲಿ ನಡೆದಿದ್ದ ಲಾಠಿಚಾರ್ಜ್ ಘಟನೆ ಖಂಡಿಸಿ, ಡಿ.10ನ್ನು ಲಿಂಗಾಯತರ ಮೇಲಿನ ದೌರ್ಜನ್ಯ ದಿನವಾಗಿ ಆಚರಿಸಲು ನಿರ್ಧರಿಸಲಾಗಿದೆ. ಮೀಸಲಾತಿ ಸಿಗುವವರೆಗೂ ಹೋರಾಟ ನಿಲ್ಲಲ್ಲ ಎಂದು ಶ್ರೀಗಳು ತಿಳಿಸಿದ್ದಾರೆ.

ಉಪವಾಸ ಸತ್ಯಾಗ್ರಹಕ್ಕೆ ಎಲ್ಲಾ ಜಿಲ್ಲೆಗಳಿಂದ ಸಾವಿರಾರು ಜನರು ಆಗಮಿಸುವ ನಿರೀಕ್ಷೆ ಇದ್ದು, ಅಧಿವೇಶನದಲ್ಲಿ ಧ್ವನಿ ಎತ್ತಲು ಸಮಾಜದ ಶಾಸಕರನ್ನು ಬಸವಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ. ಆಡಳಿತ ಮತ್ತು ವಿಪಕ್ಷದ ಶಾಸಕರು ಸಮಾಜದ ಪರ ನಿಲ್ಲಬೇಕು. ಎಲ್ಲಾ ಪೀಠಗಳ ಸ್ವಾಮೀಜಿಗಳನ್ನು ಹೋರಾಟಕ್ಕೆ ಆಹ್ವಾನಿಸಿರುವೆ. ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಹಾಗೂ ಎಲ್ಲ ಲಿಂಗಾಯತರಿಗೆ ಕೇಂದ್ರ ಒಬಿಸಿ ಪಟ್ಟಿಯಲ್ಲಿ ಸ್ಥಾನ ನೀಡ್ಬೇಕು. ರಾಜಕೀಯ ಪಕ್ಷಗಳು ಯಾವುದೇ ಇರಲಿ, ಮೀಸಲಾತಿ ಹೋರಾಟ ನಿರಂತರ ಎಂದು ಸ್ವಾಮೀಜಿ ಹೇಳಿದ್ದಾರೆ.


Spread the love

About Laxminews 24x7

Check Also

ಮಾಜಿ ಸಚಿವ ನಾಗೇಂದ್ರಗೆ ಸಿಐಡಿ ಕ್ಲೀನ್ ಚಿಟ್; ಆರೋಪಿಯಲ್ಲ ಈಗ ಸಾಕ್ಷಿ!

Spread the loveಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಬಹುಕೋಟಿ ಭ್ರಷ್ಟಾಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ