Breaking News

ಪದವಿ ಕಾಲೇಜ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ

Spread the love

ಕೌಜಲಗಿ: ಪದವಿ ಕಾಲೇಜು ಆರಂಭ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಾರ್ವಜನಿಕರು ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.
ಕೌಜಲಗಿ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಬೇಕು. ಗ್ರಾಮದಲ್ಲಿ ಪಿಯುಸಿ ಶಿಕ್ಷಣ ಮುಗಿಸಿದ ಬಳಿಕ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಗೋಕಾಕ ಸೇರಿದಂತೆ ವಿವಿಧ ನಗರಗಳಿಗೆ ತೆರಳಬೇಕು. ಹೀಗಾಗಿ, ಗ್ರಾಮದಲ್ಲಿ ಪದವಿ ಕಾಲೇಜು ಆರಂಭಿಸಬೇಕು. ಗ್ರಾಮದಲ್ಲಿ ಅಗ್ನಿಶಾಮಕ ಠಾಣೆ, ಪೊಲೀಸ್​ ಠಾಣೆ ನಿರ್ಮಾಣ ಹಾಗೂ ವ್ಯವಸ್ಥಿತ ಸಾರಿಗೆ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿದರು.
ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ಗ್ರಾಮಸ್ಥರ ಬೇಡಿಕೆ ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.
ಗ್ರಾಮದ ನೂತನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಆರೋಗ್ಯ ಅಧಿಕಾರಿಗಳು ಹಾಗೂ ವೈದ್ಯರೊಂದಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಭೆ ನಡೆಸಿದರು.
ಬಳಿಕ ಮಾತನಾಡಿದ ಅವರು, ಗ್ರಾಮದಲ್ಲಿ ಆರೋಗ್ಯ ಕೇಂದ್ರದ ಸುಸಜ್ಜಿತ ಕಟ್ಟಡ ನಿರ್ಮಾಣವಾಗಿದೆ. ಸಾರ್ವಜನಿಕರು ಸೌಲಭ್ಯ ಸದುಪಯೋಗಪಡಿಸಿಕೊಳ್ಳಬೇಕು. ಆಸ್ಪತ್ರೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗವುದು. ಮೇ 14ರಂದು ಮತ್ತೊಮ್ಮೆ ಸಭೆ ನಡೆಸಲಾಗುವುದು ಎಂದರು.
ಡಾ.ಪ್ರಶಾಂತ ಸಣ್ಣಕ್ಕಿ ಮಾತನಾಡಿ, ರಾಮದುರ್ಗ, ಸವದತ್ತಿ ತಾಲೂಕುಗಳಿಂದ ಸೇರಿದಂತೆ ವಿವಿಧೆಡೆಯಿಂದ ರೋಗಿಗಳು, ಗರ್ಭೀಣಿಯರು ಆಸ್ಪತ್ರೆಗೆ ಬರುತ್ತಾರೆ. ಸ್ಟ್​ಾ ನರ್ಸ್​ ಕೊರತೆ ಇದೆ. ಚಿಕ್ಕ ಮಕ್ಕಳು, ಅರಿವಳಿಕೆ ಹಾಗೂ ಸ್ತ್ರೀರೋಗ ತರನ್ನು ನೀಡಬೇಕು ಎಂದು ಮನವಿ ಮಾಡಿದರು.
ಟಿಎಚ್​ಒ ಮುತ್ತಪ್ಪ ಕೊಪ್ಪದ, ಡಾ.ಶ್ರೀನಿವಾಸ ಹಳ್ಳೂರ, ಮುಖಂಡರಾದ ರಮೇಶ ಪರುಶೆಟ್ಟಿ, ಈಶ್ವರ ಸತ್ತಿಗೇರಿಮಠ, ಚೇತನ ಕತ್ತಿ, ರಂಜಾನ್​ ನಗಾರ್ಚಿ, ಶಿವಾನಂದ ತುಪ್ಪದ, ಗಂಗಾಧರ ಭೋವಿ, ಈರಪ್ಪ ಶಿವಾಪುರ, ಹನಮಂತ ಕುಂದರಗಿ, ವಿಠ್ಠಲ ಹುಂಡರದ, ರಮೇಶ ಮಾಳಿ, ಮಲ್ಲು ಶಿವನಮಾರಿ ಪಾಲ್ಗೊಂಡಿದ್ದರು.

Spread the love

About Laxminews 24x7

Check Also

ಬೆಳಗಾವಿ ಮಹಾನಗರ ಪಾಲಿಕೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ದೂರು

Spread the loveಬೆಳಗಾವಿ: ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ನಿರ್ಣಯ ಕೈಗೊಳ್ಳಲು ಹಿಂದೇಟು ಹಾಕಿರುವ ಬೆಳಗಾವಿ ಮಹಾನಗರ ಪಾಲಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ