Breaking News

ಕಬ್ಬು ಬೆಳೆಗಾರರ ಬೇಡಿಕೆ | ಕೇಂದ್ರ-ರಾಜ್ಯ ಸರ್ಕಾರದ ನಡುವೆ ಜಟಾಪಟಿ; ಸಿಎಂಗೆ ಪ್ರಹ್ಲಾದ್ ಜೋಶಿ ಪತ್ರ

Spread the love

ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆಗಳು ಹಾಗೂ ಬೇಡಿಕೆಗಳ ವಿಚಾರವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ವಾಕ್ಸಮರಕ್ಕೆ ವೇದಿಕೆ ಸಿದ್ಧವಾಗಿದೆ. ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ  ಅವರು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌  ಅವರಿಗೆ ಪತ್ರ ಬರೆದಿದ್ದಾರೆ.

ಕಬ್ಬು ಖರೀದಿ, ಕಟಾವು ಮತ್ತು ಸಾಗಣೆ ಪ್ರಕ್ರಿಯೆಗಳು ಈಗಾಗಲೇ ಆರಂಭವಾಗಿದ್ದು, ರೈತರಿಗೆ ಯಾವುದೇ ತೊಂದರೆಯಾಗದಂತೆ ನ್ಯಾಯಸಮ್ಮತ ಹಾಗೂ ಪಾರದರ್ಶಕ ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಸಕ್ಕರೆ ಕ್ಷೇತ್ರದ ಅಭಿವೃದ್ಧಿ ಹಾಗೂ ರೈತರ ಬಲವರ್ಧನೆಗಾಗಿ ಕೇಂದ್ರ ಸರ್ಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವೂ ಕಬ್ಬು ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಈ ಪತ್ರ ಸಂದೇಶವನ್ನ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಎಕ್ಸ್‌ ಪೋಸ್ಟ್‌ನಲ್ಲಿ ಏನಿದೆ?
ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಮತ್ತು ಖರೀದಿ, ಕಟಾವು, ಸಾಗಣೆ ಹಾಗೂ ಸಕಾಲಿಕ ಪಾವತಿಗಳಲ್ಲಿ ನ್ಯಾಯಸಮ್ಮತ ಮತ್ತು ಪಾರದರ್ಶಕ ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರವು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ಆಗ್ರಹಿಸಿದ್ದೇನೆ.

ನ್ಯಾಯಯುತ ಮತ್ತು ಲಾಭದಾಯಕ ಬೆಲೆ  ವಾರ್ಷಿಕ ಪರಿಷ್ಕರಣೆ, ಸಕ್ಕರೆ ಕಾರ್ಖಾನೆಗಳ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ಎಥೆನಾಲ್ ನೀತಿ ಮಧ್ಯಸ್ಥಿಕೆಗಳು, ಎಥೆನಾಲ್ ಬಡ್ಡಿ ಸಹಾಯಧನ ಯೋಜನೆಯಡಿ  ಆರ್ಥಿಕ ನೆರವು ಮತ್ತು ರೈತರು, ಸಕ್ಕರೆ ಕಾರ್ಖಾನೆಗಳು ಹಾಗೂ ಇತರ ಪಾಲುದಾರರ ಬೇಡಿಕೆಗಳು ಮತ್ತು ಸಮಸ್ಯೆಗಳನ್ನು ಸಮಗ್ರವಾಗಿ ಪರಿಶೀಲಿಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸುವ ಮೂಲಕ ರೈತರ ಹಿತಾಸಕ್ತಿಗಳನ್ನು ಕಾಪಾಡಲು ಕೇಂದ್ರ ಸರ್ಕಾರವು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ.

ಸಕ್ಕರೆ ಕ್ಷೇತ್ರವನ್ನು ಬಲಪಡಿಸಲು ಮತ್ತು ನಮ್ಮ ಅನ್ನದಾತರನ್ನು ರಕ್ಷಿಸಲು ಕೇಂದ್ರ ಸರ್ಕಾರವು ನಿರ್ಣಾಯಕ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವಾಗ, ಕರ್ನಾಟಕ ಸರ್ಕಾರವೂ ಸಹ ತ್ವರಿತ ಆಡಳಿತಾತ್ಮಕ ಮತ್ತು ಆರ್ಥಿಕ ಕ್ರಮಗಳ ಮೂಲಕ ತನ್ನ ಜವಾಬ್ದಾರಿಯನ್ನ ನಿಭಾಯಿಸಬೇಕಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.


Spread the love

About Laxminews 24x7

Check Also

ಮಾಜಿ ಆಗ್ತಿದ್ದಂತೆ ದೆಹಲಿಯಲ್ಲಿ ಸಿದ್ದರಾಮಯ್ಯ ಪವರ್ ಕಡಿಮೆಯಾಯ್ತಾ?

Spread the love ನವದೆಹಲಿ/ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ‘ಮಾಜಿ’ಯಾಗುತ್ತಿದ್ದಂತೆಯೇ ದೆಹಲಿ ಹೈಕಮಾಂಡ್ ಮಟ್ಟದಲ್ಲಿ ಸಿದ್ದರಾಮಯ್ಯ  ಅವರ ಪ್ರಭಾವ ಕಡಿಮೆಯಾಯಿತೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ