Breaking News

ಬೆಂಗಳೂರಲ್ಲಿ ಬಂಧಿತರಾಗಿದ್ದ 31 ಬಾಂಗ್ಲಾ ಪ್ರಜೆಗಳ ಗಡಿಪಾರು

Spread the love

ಬೆಂಗಳೂರು: ರಾಜಧಾನಿಯಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿದ್ದ 31 ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ಗಡಿಪಾರು ಮಾಡುತ್ತಿದ್ದಾರೆ.

ಬೆಂಗಳೂರಿನ ವಿವಿಧ 10 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬಂಧಿಸಲಾಗಿದ್ದ ಇವರನ್ನು ಬಿಗಿ ಭದ್ರತೆಯೊಂದಿಗೆ ಪಶ್ಚಿಮ ಬಂಗಾಳದ ಗಡಿ ಭಾಗಕ್ಕೆ ಕರೆದೊಯ್ಯಲಾಗುತ್ತಿದೆ.

ಬೆಳ್ಳಂಬೆಳಗ್ಗೆಯೇ 31 ಮಂದಿಯನ್ನು ಪೊಲೀಸರು ಬೆಂಗಳೂರಿನ ಎಸ್‌ಎಂವಿಟಿ ರೈಲ್ವೆ ಟರ್ಮಿನಲ್ ಮೂಲಕ ರೈಲಿನಲ್ಲಿ ಕರೆದೊಯ್ದಿದ್ದಾರೆ. ಸುಮಾರು 20 ಪೊಲೀಸ್ ಸಿಬ್ಬಂದಿ ಭದ್ರತೆಯಲ್ಲಿ ಈ ಗಡಿಪಾರು ಪ್ರಕ್ರಿಯೆ ನಡೆಯುತ್ತಿದೆ.

ಪೊಲೀಸ್ ಸಿಬ್ಬಂದಿ ನಾಳೆ ಸಂಜೆ 5 ಗಂಟೆ ವೇಳೆಗೆ ಬಾಂಗ್ಲಾದೇಶದ ಗಡಿ ಸಮೀಪದ ಪಶ್ಚಿಮ ಬಂಗಾಳದ ಮಾಲ್ದಾ ತಲುಪುವ ನಿರೀಕ್ಷೆಯಿದೆ. ಅಲ್ಲಿಂದ ನಿಯಮಾನುಸಾರ ಮುಂದಿನ ಪ್ರಕ್ರಿಯೆ ನಡೆಸಲಾಗುತ್ತದೆ.


Spread the love

About Laxminews 24x7

Check Also

ಬಿಷ್ಕೆಕ್‌ನಲ್ಲಿ ಪ್ರಧಾನಿ ಮೋದಿ & ಇರಾನ್‌ ಅಧ್ಯಕ್ಷ ಇಂದು ಭೇಟಿ

Spread the loveಬಿಷ್ಕೆಕ್: ಭಾರತದ ಪ್ರಧಾನಿ ನರೇಂದ್ರ ಮೋದಿ  ಅವರು ಇಂದು ಬಿಷ್ಕೆಕ್‌ನಲ್ಲಿ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್  ಅವರನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ