Breaking News

ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಭೇಟಿ ನೀಡಿದ ಡಿಸಿಎಂ ಪರಮೇಶ್ವರ್

Spread the love

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಬೆಳಗಾವಿಗೆ ಆಗಮಿಸಿದ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಭೇಟಿ ನೀಡಿದರು.

ಈ ವೇಳೆ ಬರ ಪರಿಸ್ಥಿತಿ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಸ್ಥಳೀಯ ಶಾಸಕರಾದ ಅಶೋಕ್ ಎಂ. ಪಟ್ಟಣ, ರಾಜು ಆಸೀಫ್ ಸೇಠ್, ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಬೆಳಗಾವಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ ಇದ್ದರು.


Spread the love

About Laxminews 24x7

Check Also

ಸರ್ಕಾರದಿಂದ ಬಾರದ ಕೋಟ್ಯಂತರ ರೂಪಾಯಿ ಅನುದಾನ – ಪತ್ರ ಬರೆದು ಕೆಆರ್‌ಐಡಿಎಲ್ ಎಇಇ ನಾಪತ್ತೆ!

Spread the loveಗದಗ: ರಾಜ್ಯ ಸರ್ಕಾರದ ಅನುದಾನ ಬಾರದಕ್ಕೆ ಪತ್ರ ಬರೆದು KRIDL ಎಇಇ (ಸಹಾಯಕ ಕಾರ್ಯಪಾಲಕ ಎಂಜಿನಿಯರ್) ಅಧಿಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ