Breaking News

ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿರವಾಗಿದೆ: ಆರ್‌. ಅಶೋಕ್‌

Spread the love

ಬೆಂಗಳೂರು: ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌  ಹೇಳಿದ್ದಾರೆ.

ನಗರದ ಮಣಿಪಾಲ್‌ ಆಸ್ಪತ್ರೆಗೆ ಭೇಟಿ ನೀಡಿ ಚೆನ್ನಮ್ಮ ಅವರ ಆರೋಗ್ಯವನ್ನು ಅವರು ವಿಚಾರಿಸಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ವೇಳೆ, ಚೆನ್ನಮ್ಮನವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ವೈದ್ಯರು ಸಹ ಆರೋಗ್ಯ ಸುಧಾರಣೆ ಕಾಣುತ್ತಿದೆ ಎಂದು ತಿಳಿಸಿದ್ದಾರೆ ಎಂದರು.

ಚೆನ್ನಮ್ಮ  ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ನಗರದ ಮಣಿಪಾಲ್‌ ಆಸ್ಪತ್ರೆಗೆ  ದಾಖಲಿಸಲಾಗಿದೆ.

ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಚೆನ್ನಮ್ಮ ಅವರನ್ನ ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ತಜ್ಞ ವೈದ್ಯರ ನಿಗಾದಲ್ಲಿ ಅವರಿಗೆ ಚಿಕಿತ್ಸೆ ಮುಂದುವರಿದಿದ್ದು, ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನೂ ನಡೆಸಲಾಗುತ್ತಿದೆ.

ವೈದ್ಯಕೀಯ ಮೂಲಗಳ ಮಾಹಿತಿ ಪ್ರಕಾರ, ಚೆನ್ನಮ್ಮ ಅವರ ಆರೋಗ್ಯ ಸದ್ಯ ಸ್ಥಿರವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ವೈದ್ಯರು ನಿರಂತರವಾಗಿ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಆಸ್ಪತ್ರೆಯಲ್ಲೇ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಬ್ಯಾಲೆಟ್ ಪೇಪರ್‌ನಲ್ಲೇ ಕಾಂಗ್ರೆಸ್ ಸೋತಿದೆ, ಪತನದ ದಿನಗಳು ಹತ್ತಿರ ಬರ್ತಿದೆ: ನಿಖಿಲ್ ಕುಮಾರಸ್ವಾಮಿ

Spread the loveರಾಮನಗರ: ಕಾಂಗ್ರೆಸ್  ಇವಿಎಂ ಮೇಲೆ ಅನುಮಾನ ಪಟ್ಟು, ಬ್ಯಾಲೆಟ್ ಪೇಪರ್  ಚುನಾವಣೆ ಬೇಕು ಅಂತಿದ್ದರು. ಈಗ ಬ್ಯಾಲೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ