Breaking News

ಧಾರವಾಡದ ಹಳ್ಳಿಗಳಲ್ಲಿ ಅಕ್ರಮ ಮದ್ಯದ ಹಾವಳಿ: ಅಬಕಾರಿ ಅಧಿಕಾರಿಗಳಿಗೆ ಶಾಸಕ ವಿನಯ್ ಕುಲಕರ್ಣಿ ತರಾಟೆ

Spread the love

ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟದ ವಿರುದ್ಧ ಶಾಸಕ ವಿನಯ್ ಕುಲಕರ್ಣಿ ಕೆಂಡಾಮಂಡಲವಾಗಿದ್ದಾರೆ. ತಾಲೂಕು ಮಟ್ಟದ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳ ಕಾರ್ಯವೈಖರಿಯನ್ನು ತೀವ್ರವಾಗಿ ಪ್ರಶ್ನಿಸಿದ ಶಾಸಕರು, ಇಲಾಖೆಯ ನಿರ್ಲಕ್ಷ್ಯಕ್ಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಧಾರವಾಡದಲ್ಲಿ ಶಾಸಕ ವಿನಯ್ ಕುಲಕರ್ಣಿ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಅಬಕಾರಿ ಇಲಾಖೆಯ ವೈಫಲ್ಯಗಳು ಅನಾವರಣಗೊಂಡವು. ಹಳ್ಳಿ ಹಳ್ಳಿಗಳಲ್ಲಿ ಎಲ್ಲಿ ಬೇಕೆಂದರಲ್ಲಿ ಅಕ್ರಮವಾಗಿ ಮದ್ಯ ಮಾರಾಟವಾಗುತ್ತಿದ್ದು, ನಿತ್ಯ ನೂರಾರು ದೂರುಗಳು ಬರುತ್ತಿವೆ ಎಂದು ಶಾಸಕರು ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದರು. “ಗ್ರಾಮೀಣ ಭಾಗದಲ್ಲಿ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದರೆ ಅಧಿಕಾರಿಗಳು ಏನು ಮಾಡುತ್ತಿದ್ದೀರಿ?” ಎಂದು ವಿನಯ್ ಕುಲಕರ್ಣಿ ಖಾರವಾಗಿ ಪ್ರಶ್ನಿಸಿದರು. ಶಾಸಕರ ಸರಣಿ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಅಬಕಾರಿ ಅಧಿಕಾರಿಗಳು ಸಭೆಯಲ್ಲಿ ತಲೆತಗ್ಗಿಸಿ ನಿಂತಿದ್ದ ದೃಶ್ಯ ಕಂಡುಬಂದಿತು.


Spread the love

About Laxminews 24x7

Check Also

ಧಾರವಾಡದಲ್ಲಿ ಹೋರಾಟಕ್ಕೆ ಮುಂದಾಗಿದ್ದ ಉದ್ಯೋಗಾಕಾಂಕ್ಷಿಗಳು ಪೊಲೀಸರ ವಶಕ್ಕೆ

Spread the loveಧಾರವಾಡ: ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಅಂಬೇಡ್ಕರ್‌ ಜಯಂತಿ ದಿನವಾದ ಇಂದು ಧಾರವಾಡದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ