Breaking News

50 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ತಹಸೀಲ್ದಾರ್‌

Spread the love

ಧಾರವಾಡ: 50 ಲಕ್ಷ ರೂ. ಲಂಚ ಪಡೆಯುವಾಗ ತಹಸೀಲ್ದಾರ್‌ವೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಧಾರವಾಡ ತಹಸೀಲ್ದಾರ್ ಸಚ್ಚಿದಾನಂದ ಕುಚನೂರ್ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಭೂಮಿ ಸಿ ಖರಾಬ್ ತೆಗೆಯಲು ಒಂದು‌ ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಮುಧೋಳ್ ಮೂಲದ ಡೆವಲಪರ್ ಮಂಜುನಾಥ ಅಂಗಡಿ ಎಂಬಾತನ ಬಳಿ 1 ಕೋಟಿಗೆ‌ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 50 ಲಕ್ಷ ಹಣ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ.

ಧಾರವಾಡ ತಾಲೂಕಿನ ಯರಿಕೊಪ್ಪ ಬಳಿ ಡೆವಲಪರ್‌ ಜಮೀನು ಖರೀದಿಸಿದ್ದರು. ಜಮೀನಿನಲ್ಲಿನ ಸಿ ಖರಾಬ್ ತೆಗೆದು ಡೆವಲಪ್ಮೆಂಟ್ ಮಾಡಲು ಮುಂದಾಗಿದ್ದರು. ಅವರಿಂದ ತಹಸೀಲ್ದಾರ್ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ