ಧಾರವಾಡ: ತಾಲೂಕಿನ ಇಟಿಗಟ್ಟಿ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಐವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ.
ಟೆಂಪೋ ಹಾಗೂ ಲಾರಿಯ ನಡುವೆ ಅಪಘಾತ ನಡೆದಿದ್ದು, ತೀವ್ರವಾಗಿ ಗಾಯಗೊಂಡಿರುವವರನ್ನ ಧಾರವಾಡ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗುತ್ತಿದೆ.
ವಾಹನದಲ್ಲಿ ಇನ್ನೂ ಶವಗಳು ಸಿಲುಕಿಕೊಂಡಿದ್ದು, ಅವುಗಳನ್ನ ತೆಗೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಬೆಳಗಿನ ಜಾವ ಮೂರು ಗಂಟೆಗೆ ದಾವಣಗೆರೆಯಿಂದ ಹೊರಟಿದ್ದ ಟೆಂಪೋ ಧಾರವಾಡದ ಸಮೀಪ ಬಂದಾಗ ಈ ಭೀಕರ ಘಟನೆ ನಡೆದಿದೆ. ಮೃತಪಟ್ಟವರ ಬಗ್ಗೆ ಹೆಚ್ಚಿನ ಮಾಹಿತಿ ಸಿಗಬೇಕಿದೆ.