Breaking News

ಭ್ರೂಣ ಲಿಂಗ ಪತ್ತೆ ನಿಷೇಧ ಶಾಸನ: ಜಿಲ್ಲಾ ಸಲಹಾ ಸಮಿತಿ ಸಭೆ ನಡೆಸಿದ ಡಿಎಚ್‌ಓ

Spread the love

ಬೆಳಗಾವಿ: ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಶಾಸನ 1994 (ಪಿ.ಸಿ.ಪಿ.ಎನ್.ಡಿ.ಟಿ 1994 ಕಾಯ್ದೆ) ನೂತನ ಜಿಲ್ಲಾ ಸಲಹಾ ಸಮಿತಿ ಸಭೆ ಇಂದು ಜರುಗಿತು.

ಸಕಾರದ ಉಪ ಕಾರ್ಯದರ್ಶಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಸೂಚನೆ ಪ್ರಕಾರ ಮುಂದಿನ 3 ವರ್ಷಗಳ ಅವಧಿಗೆ ಬೆಳಗಾವಿ ಜಿಲ್ಲಾ ಮಟ್ಟದ ನೂತನ ಸಲಹಾ ಸಮಿತಿಯ ಸಭೆಯನ್ನು ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು.

ಸಭೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ ಪಿ.ಸಿ.ಪಿ.ಎನ್.ಡಿ.ಟಿ ನೊಡಲ್ ಅಧಿಕಾರಿಗಳಾದ ಡಾ.ವಿಶ್ವನಾಥ ಎಮ್ ಭೋವಿರವರು ನೂತನ ಸಭೆಯ ಅಧ್ಯಕ್ಷರನ್ನು ಮತ್ತು ಎಲ್ಲ ಸರ್ವ ಸದಸ್ಯರನ್ನು ಸ್ವಾಗತಿಸಿದರು.

ಪಿ.ಸಿ.ಪಿ.ಎನ್.ಡಿ.ಟಿ 1994 ರ ಕುರಿತು ಸರ್ವ ಸದಸ್ಯರ ಜವಾಬ್ದಾರಿಗಳು ಮತ್ತು ತಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸಭೆಗೆ ಮಾಹಿತಿ ನೀಡಿದರು. ಅದೇ ರೀತಿ ಎಲ್ಲ ಸದಸ್ಯರು ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ನೂತನ ಜಿಲ್ಲಾ ಸಮಿತಿಯ ಅಧ್ಯಕ್ಷರಾಗಿ ಡಾ.ಮಂಜುನಾಥ ಹುಕ್ಕೇರಿ ಹಾಗೂ ಸದಸ್ಯರಾಗಿ ಡಾ.ರಮೇಶ ಚಂ ಪಟ್ಟಣಶೆಟ್ಟಿ, ಡಾ.ಸ್ವಪ್ಟಿಲ್ ಪಟ್ಟಣಶೆಟ್ಟಿ, ಕುಮಾರ ಜ್ಯೋತೇಪ್ಪಾ ಸರವದೆ, ಸಂಜಯ ಪಂಚಾಕ್ಷರಿ ಹೊಸಮಠ, ಸವಿತಾ ಸುಬಾಷ ಹೆಬ್ಬಾರ ಮತ್ತು ಮಹಾದೇವ ಕೇ ರಾಠೋಡ ರವರು ಸಭೆಯಲ್ಲಿ ಪಾಲ್ಗೊಂಡು ಸಲಹೆ ಸೂಚನೆಗಳನ್ನು ನೀಡಿದರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ