Breaking News

ಧಾರವಾಡದಲ್ಲಿ ಎರಡೂವರೆ ವರ್ಷದ ಮಗು ಡಿಸ್ಚಾರ್ಜ್- ನಾಲ್ಕು ವರ್ಷದ ಮಗು ಸೇರಿ ನಾಲ್ವರಿಗೆ ಕೊರೊನಾ

Spread the love

ಧಾರವಾಡ: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಎರಡೂವರೆ ವರ್ಷದ ಮಗು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಜಿಲ್ಲೆಯಲ್ಲಿ ನಾಲ್ಕು ಹೊಸ ಪ್ರಕರಣಗಳು ಪತ್ತೆಯಾಗಿವೆ.

ಈ ಕುರಿತು ಜಿಲ್ಲಾಧಿಕಾರಿ ದೀಪಾ ಚೋಳನ್ ಮಾಹಿತಿ ನೀಡಿದ್ದು, 46 ವರ್ಷದ ಪುರುಷ ರೋಗಿ ನಂ.5,482, 42 ವರ್ಷದ ಮಹಿಳೆ ರೋಗಿ ನಂ.5483 ಹಾಗೂ 14 ವರ್ಷದ ಬಾಲಕ ರೋಗಿ ನಂ.5,484 ಈ ಮೂವರು ರಾಜಸ್ಥಾನದಿಂದ ಹಿಂದಿರುಗಿರುವ ಹಿನ್ನೆಲೆ ಹೊಂದಿದ್ದಾರೆ. ಇವರು ಹುಬ್ಬಳ್ಳಿ ಮಂಗಳವಾರಪೇಟೆಯ ನಿವಾಸಿಗಳಾಗಿದ್ದು, ಹೋಮ್ ಕ್ವಾರಂಟೈನ್ ನಲ್ಲಿದ್ದರು ಎಂದು ತಿಳಿಸಿದ್ದಾರೆ.

ಹುಬ್ಬಳ್ಳಿಯ ಶಾಂತಿನಗರ ವಿನಯ ಕಾಲನಿ ನಿವಾಸಿಯಾಗಿರುವ 4 ವರ್ಷದ ಬಾಲಕಿ ರೋಗಿ ನಂ.5,485ಗೆ ಸೋಂಕು ದೃಢಪಟ್ಟಿದೆ. ಮಹಾರಾಷ್ಟ್ರ ಪ್ರವಾಸದ ಹಿನ್ನೆಲೆ ಹೊಂದಿದ್ದಾರೆ. ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದರು. ಇನ್ನು ಕೊರೊನಾದಿಂದ ಗುಣಮುಖವಾಗಿರುವ 2 ವರ್ಷ 5 ತಿಂಗಳ ಗಂಡು ಮಗು ರೋಗಿ ನಂ.2,158ನ್ನು ಹುಬ್ಬಳ್ಳಿಯ ಕಿಮ್ಸ್ ನಿಂದ ಡಿಸ್ಚಾರ್ಜ್ ಮಾಡಲಾಗಿದೆ. ಮಗುವಿಗೆ ಮೇ.25 ರಂದು ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಜಿಲ್ಲೆಯಲ್ಲಿ ಇದುವರೆಗೆ 39 ಜನ ಕೋವಿಡ್-19ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ್ದಾರೆ ಎಂದು ವಿವರಿಸಿದ್ದಾರೆ.


Spread the love

About Laxminews 24x7

Check Also

‘ಪಕ್ಷ ಭೇದ ಮರೆತು ಕೆಲಸ ಮಾಡಿದಾಗ ಮಾತ್ರ ಬೆಂಗಳೂರಿಗೆ ಸಮಾನಾಂತರವಾಗಿ ಬೆಳಗಾವಿ ಜಿಲ್ಲೆಯೂ ಬೆಳೆಯಲು ಸಾಧ್ಯ: ಸತೀಶ ಜಾರಕಿಹೊಳಿ

Spread the loveಬೆಳಗಾವಿ: ”ಪಕ್ಷ ಭೇದ ಮರೆತು ಕೆಲಸ ಮಾಡಿದಾಗ ಮಾತ್ರ ಬೆಂಗಳೂರಿಗೆ ಸಮಾನಾಂತರವಾಗಿ ಬೆಳಗಾವಿ ಜಿಲ್ಲೆಯೂ ಬೆಳೆಯಲು ಸಾಧ್ಯವಾಗುತ್ತದೆ” ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ