Breaking News

ಮದ್ಯ ನಿಷೇಧಕ್ಕೆ ಆಗ್ರಹಿಸಿ ಸರ್ಕಾರಕ್ಕೆ ಹಣ ಕಳಿಸಿದ ಮಹಿಳೆಯರು…………

Spread the love

ಧಾರವಾಡ: ಸರ್ಕಾರಕ್ಕೆ ಮಹಿಳೆಯರು ಹಣ ಕಳುಹಿಸುವ ಮೂಲಕ ರಾಜ್ಯದಲ್ಲಿ ಮದ್ಯ ನಿಷೇಧಿಸುವಂತೆ ಒತ್ತಾಯಿಸಿದ್ದಾರೆ.

ನಗರದ ಮುರುಘಾಮಠ ಆವರಣದ ಅಂಚೆ ಕಚೇರಿ ಎದುರು ಪ್ರತಿಭಟನೆ ಮಾಡಿದ ಮಹಿಳೆಯರು, ಮನಿ ಆರ್ಡರ್ ಮೂಲಕ ಸರ್ಕಾರಕ್ಕೆ ಹಣ ಕಳುಹಿಸಿ ರಾಜ್ಯದಲ್ಲಿ ಮದ್ಯ ನಿಷೇಧಿಸುವಂತೆ ಆಗ್ರಹಿಸಿದ್ದಾರೆ. ಈ ಮೂಲಕ ಮಹಿಳೆಯರು ವಿನೂತನ ಪ್ರತಿಭಟನೆ ಮಾಡಿದ್ದಾರೆ.

ಈ ಮೊದಲು ಮಹಿಳೆಯರು ಮನಿ ಆರ್ಡರ್ ಅಭಿಯಾನ ಮಾಡಿದ್ದರು. ಈ ವೇಳೆ ನೂರಾರು ಮಹಿಳೆಯರಿಂದ 1,020ರೂಪಾಯಿ ಜಮೆಯಾಗಿತ್ತು. ಈ ಹಣವನ್ನು ಇದೀಗ ರಾಜ್ಯ ಸರ್ಕಾರಕ್ಕೆ ಮನಿ ಆರ್ಡರ್ ಮಾಡಿದ್ದಾರೆ. ನಂತರ ಅಂಚೆ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರದ ಖಜಾನೆಗೆ ನಾವು ದುಡಿದ ಹಣ ಕೊಡುತ್ತೇವೆ, ಆದರೆ ಮದ್ಯ ಮಾರಾಟ ನಿಷೇಧಿಸಬೇಕು ಎಂದು ಪ್ರತಿಭಟನಾಕಾರ ಮಹಿಳೆಯರು ಆಗ್ರಹಿಸಿದರು.


Spread the love

About Laxminews 24x7

Check Also

ಧಾರವಾಡ | ಕೊರಿಯನ್ ಗೇಮ್‍ ಗೀಳಿಗೆ ಯುವಕ ಬಲಿ

Spread the loveಧಾರವಾಡ: ಕೊರಿಯನ್ ಗೇಮ್‍ ಗೀಳಿಗೆ ಯುವಕನೊಬ್ಬ ಬಲಿಯಾದ ಘಟನೆ ಧಾರವಾಡ ನಗರದ ಮಂಗಳಗಟ್ಟಿ ಪ್ಲಾಟ್‍ನಲ್ಲಿ ನಡೆದಿದೆ. ನೇಣಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ