ಧಾರವಾಡ/ಹುಬ್ಬಳ್ಳಿ: ಚಿತ್ರದುರ್ಗ ಜಿಲ್ಲೆಯಿಂದ ಲಾರಿಗಳ ಮೂಲಕ ಮಹಾರಾಷ್ಟ್ರಕ್ಕೆ ಹೊರಟಿದ್ದ ಕಾರ್ಮಿಕರನ್ನು ಧಾರವಾಡ ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ್ ಹಾಗೂ ಗ್ರಾಮೀಣ ತಹಶೀಲ್ದಾರ ಪ್ರಕಾಶ್ ನಾಶಿ ತಡೆದಿದ್ದಾರೆ.
ಹುಬ್ಬಳ್ಳಿ ಸಮೀಪದ ವರೂರ- ಅಗಡಿ ಬಳಿ ಪೊಲೀಸರ ಕಣ್ಣು ತಪ್ಪಿಸಿ ಲಾರಿಯಲ್ಲಿ ನೂರಾರು ಜನರು ಮಹಾರಾಷ್ಟ್ರಕ್ಕೆ ಹೊರಟಿದ್ದರು. ಖಚಿತ ಮಾಹಿತಿ ಮೇಲೆ ಲಾರಿಯನ್ನು ತಪಾಸಣೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಎಲ್ಲರನ್ನು ವೈದ್ಯಕೀಯ ಪರೀಕ್ಷೆ ನಡೆಸಿ ಬೇರೆ ವಾಹನಗಳ ಮೂಲಕ ಕಳುಹಿಸಿಕೊಡುವ ಏರ್ಪಾಡುಗಳನ್ನು ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ್ ಮಾಡಿದ್ದಾರೆ.

ಲಾಕ್‍ಡೌನ್ ಸಡಿಲಿಕೆಯಾದ ಮೇಲೆ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಲೆ ಇವೆ. ಅನ್ಯ ರಾಜ್ಯದಿಂದ ಆಗಮಿಸಿದವರಿಂದಲೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗಿವೆ. ಇಂದು ಸಹ 75 ಹೊಸ ಪ್ರಕರಣಗಳು ಬೆಳಕಿಗೆ ಬಂದಿದೆ.https://youtu.be/KZ6ciVeX_Nc
Laxmi News 24×7