ಧಾರವಾಡ: ಚಲಿಸುತ್ತಿದ್ದ ಲಾರಿಯಲ್ಲಿದ್ದ ಮಶಿನ್‍ಗೆ ಏಕಾಏಕಿ ಬೆಂಕಿ ತಗುಲಿದ ಘಟನೆ ಧಾರವಾಡ ಜಿಲ್ಲೆಯ ತೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಪುಣೆಯಿಂದ ಬೆಂಗಳೂರಿನ ಕೈಗಾರಿಕಾ ಪ್ರದೇಶಕ್ಕೆ ಈ ಮಶಿನ್‍ನ್ನು ಲಾರಿ ಹೊತ್ತೊಯ್ಯುತ್ತಿತ್ತು. ತೇಗೂರು ಬಳಿ ಮಿನಿ ಲಾರಿ ಬರುತ್ತಿದ್ದಂತೆ ಲಾರಿಯಲ್ಲಿದ್ದ ಮಶಿನ್‍ಗೆ ಬೆಂಕಿ ಹೊತ್ತಿಕೊಂಡಿರುವುದು ಕಂಡು ಬಂದಿದೆ. ಬೆಂಕಿ ಕಾಣಿಸಿಕೊಂಡಿದ್ದರಿಂದ ಆತಂಕಗೊಂಡ ಲಾರಿ ಚಾಲಕ, ಪಕ್ಕದಲ್ಲೇ ನೀರು ಇರುವುದನ್ನು ಕಂಡು ರಸ್ತೆ ಬದಿ ಲಾರಿ ನಿಲ್ಲಿಸಿ ಕೆಳಗಿಳಿದಿದ್ದಾನೆ.
ಪಕ್ಕದಲ್ಲೇ ಇದ್ದ ನೀರಿನಿಂದ ಸ್ಥಳದಲ್ಲಿದ್ದ ಜನರೇ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಪ್ರಕರಣದ ಕುರಿತು ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.