Breaking News
Home / ಜಿಲ್ಲೆ / ಕೋವಿಡ್-19 ಪರಿಹಾರ ನಿಧಿಗೆ ಧಾರವಾಡ ಜಿಲ್ಲೆಯ ಕಂಡಕ್ಟರ್ ಒಬ್ಬರು ತಮ್ಮ ಒಂದು ತಿಂಗಳ ವೇತನ ನೀಡಿ ಮಾನವೀಯತೆ ಮೆರೆದಿದ್ದಾರೆ.

ಕೋವಿಡ್-19 ಪರಿಹಾರ ನಿಧಿಗೆ ಧಾರವಾಡ ಜಿಲ್ಲೆಯ ಕಂಡಕ್ಟರ್ ಒಬ್ಬರು ತಮ್ಮ ಒಂದು ತಿಂಗಳ ವೇತನ ನೀಡಿ ಮಾನವೀಯತೆ ಮೆರೆದಿದ್ದಾರೆ.

Spread the love

ಧಾರವಾಡ: ಕೋವಿಡ್-19 ಪರಿಹಾರ ನಿಧಿಗೆ ಜಿಲ್ಲೆಯ ಕಂಡಕ್ಟರ್ ಒಬ್ಬರು ತಮ್ಮ ಒಂದು ತಿಂಗಳ ವೇತನ ನೀಡಿ ಮಾನವೀಯತೆ ಮೆರೆದಿದ್ದಾರೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸವರಾಜ ನೀಲಪ್ಪ ಗಾಣಿಗೇರ ಅವರು ಧಾರವಾಡ ಜಿಲ್ಲಾಧಿಕಾರಿಗಳ ಮೂಲಕ 25 ಸಾವಿರ ರೂ.ಗಳನ್ನು ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ ನೀಡಿದ್ದಾರೆ. ಬಸವರಾಜ ಅವರು ನವಲಗುಂದ ತಾಲೂಕಿನ ಶಿರಕೋಳ ಗ್ರಾಮದ ನಿವಾಸಿಯಾಗಿದ್ದು, ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ ವಿಭಾಗದ ಒಂದನೇ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಚೆಕ್ ಸ್ವೀಕರಿಸಿದ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು, ಸಾರಿಗೆ ಸಂಸ್ಥೆಯ ಕಂಡಕ್ಟರ್ ಬಸವರಾಜ ಅವರು ಸ್ವಯಂ ಪ್ರೇರಣೆಯಿಂದ ತಮ್ಮ ಒಂದು ತಿಂಗಳ ವೇತನವನ್ನು ಕೋವಿಡ್ ಪರಿಹಾರ ನಿಧಿಗೆ ನೀಡಿರುವುದು ಸಮಾಜಕ್ಕೆ ಮಾದರಿಯಾದ ಕಾರ್ಯವಾಗಿದೆ. ಜಿಲ್ಲಾಡಳಿತ ಈ ಕಾರ್ಯವನ್ನು ಪ್ರಶಂಸಿಸುತ್ತದೆ ಎಂದರು.

ಈ ವೇಳೆ ವಾ.ಕ.ರ.ಸಾ.ಸಂ ವಿಭಾಗೀಯ ನಿಯಂತ್ರಕರಾದ ವಿವೇಕಾನಂದ ವಿಶ್ವಜ್ಞ, ಹನುಮಂತ ಬೋಜೇದಾರ್, ಬಸವರಾಜ ಅವಾರಿ, ಎಂ.ಎಸ್.ರೋಣದ, ವೆಂಕಟೇಶ್ ಹರ್ತಿ, ಡಾ.ಪಿ.ವಿ.ಸವದಿ ಇದ್ದರು


Spread the love

About Laxminews 24x7

Check Also

ಬಿಜೆಪಿಯವರದ್ದು ಸಬ್ ಕಾ ವಿಕಾಸ್ ಅಲ್ಲ, ಸಬ್ ಕಾ ಸರ್ವನಾಶ್: ಸಿದ್ದರಾಮಯ್ಯ

Spread the love ಮೈಸೂರು : ‘ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಉದ್ದೇಶ ಸಬ್ ಕಾ ವಿಕಾಸ್ ಅಲ್ಲ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ