Breaking News

ಡೀಸೆಲ್ ಕೊರತೆ – ಡಿಪೋದಲ್ಲೇ ನಿಂತ ಕೆಎಸ್‌ಆರ್‌ಟಿಸಿ ಬಸ್‌ಗಳು

Spread the love

ಕೊಪ್ಪಳ: ಜಿಲ್ಲೆಯ ಗಂಗಾವತಿ ಹಾಗೂ ಕುಷ್ಟಗಿ ಕೆಎಸ್‌ಆರ್‌ಟಿಸಿ) ಸಾರಿಗೆ ಡಿಪೋಗಳಲ್ಲಿ ಕಳೆದ 2–3 ದಿನಗಳಿಂದ ತೀವ್ರ ಡೀಸೆಲ್ ಅಭಾವ ಎದುರಾಗಿದ್ದು, ನೂರಾರು ಬಸ್‌ಗಳು ಡಿಪೋಗಳಲ್ಲೇ ಸಾಲುಗಟ್ಟಿ ನಿಲ್ಲುವಂತಾಗಿದೆ. ಇದರಿಂದಾಗಿ ಗ್ರಾಮೀಣ ಹಾಗೂ ದೂರದ ಊರುಗಳಿಗೆ ತೆರಳುವ ಬಸ್‌ಗಳ ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದು, ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಪ್ರತಿದಿನ ಬಸ್‌ಗಳ ಸಂಚಾರಕ್ಕೆ ಸಾವಿರಾರು ಲೀಟರ್ ಡೀಸೆಲ್ ಅಗತ್ಯವಿದ್ದು, ಕಂಪನಿಗಳಿಂದ ಸಕಾಲದಲ್ಲಿ ಸಮರ್ಪಕ ಡೀಸೆಲ್ ಪೂರೈಕೆಯಾಗದ ಕಾರಣ ಹಲವು ಮಾರ್ಗಗಳ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಪರಿಣಾಮವಾಗಿ ನಿತ್ಯ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ಕಚೇರಿ ನೌಕರರು, ಕಾರ್ಮಿಕರು ಹಾಗೂ ರೈತರು ಬಸ್‌ಗಳಿಲ್ಲದೆ ಗಂಟೆಗಟ್ಟಲೆ ಬಸ್ ನಿಲ್ದಾಣಗಳಲ್ಲೇ ಕಾದು ಕುಳಿತುಕೊಳ್ಳುವಂತಾಗಿದೆ. ಅನಿವಾರ್ಯವಾಗಿ ಸಾರ್ವಜನಿಕರು ಖಾಸಗಿ ವಾಹನಗಳು ಹಾಗೂ ಆಟೋಗಳನ್ನು ಅವಲಂಬಿಸಿ ಜೇಬು ಸುಟ್ಟುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಜ್ಯ ಸರ್ಕಾರದ ಅಸಮರ್ಪಕ ಆರ್ಥಿಕ ನಿರ್ವಹಣೆ ಹಾಗೂ ಗ್ಯಾರಂಟಿ ಯೋಜನೆಗಳ ಹೊರೆಯಿಂದಾಗಿ ಸಾರಿಗೆ ಸಂಸ್ಥೆ ಆರ್ಥಿಕ ಮುಗ್ಗಟ್ಟಿಗೆ ಸಿಲುಕಿದ್ದು, ಬಸ್‌ಗಳಿಗೆ ಡೀಸೆಲ್ ಹಾಕಿಸಲೂ ಹಣವಿಲ್ಲದಂತಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ಭಾಗವಾಗಿ ಕುಷ್ಟಗಿ ಸಾರಿಗೆ ಬಸ್ ನಿಲ್ದಾಣದ ಎದುರು ಬಿಜೆಪಿ ಕಾರ್ಯಕರ್ತರು ಕೈಯಲ್ಲಿ ಖಾಲಿ ಕೊಡ ಹಿಡಿದು ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸುವ ಮೂಲಕ ವಿನೂತನವಾಗಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಧಿಕ್ಕಾರ ಕೂಗಿದರು.

ಡೀಸೆಲ್ ಪೂರೈಕೆ ಸಮಸ್ಯೆಯನ್ನು ಸರ್ಕಾರ ಹಾಗೂ ಸಾರಿಗೆ ಇಲಾಖೆಯ ಉನ್ನತ ಅಧಿಕಾರಿಗಳು ಯುದ್ಧೋಪಾದಿಯಲ್ಲಿ ಬಗೆಹರಿಸಿ, ಸ್ಥಗಿತಗೊಂಡಿರುವ ಎಲ್ಲಾ ಮಾರ್ಗಗಳ ಬಸ್ ಸಂಚಾರವನ್ನು ತಕ್ಷಣವೇ ಪುನರಾರಂಭಿಸಬೇಕು ಎಂದು ಸ್ಥಳೀಯ ನಾಗರಿಕರು ಹಾಗೂ ಪ್ರಯಾಣಿಕರು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಕುಡಿದ ಮತ್ತಿನಲ್ಲಿ ಪೆಟ್ರೋಲ್ ಬಂಕ್‌ಗೆ ಜಾಗ್ವಾರ್ ಡಿಕ್ಕಿ – ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಕಾರು, ಬಂಕ್‌

Spread the loveಬೆಂಗಳೂರು: ಮದ್ಯದ ಅಮಲಿನಲ್ಲಿ ಅತಿವೇಗವಾಗಿ ಬಂದ ಜಾಗ್ವಾರ್ ಕಾರೊಂದು ನಿಯಂತ್ರಣ ತಪ್ಪಿ ಪೆಟ್ರೋಲ್ ಬಂಕ್‌ಗೆ ಡಿಕ್ಕಿ ಹೊಡೆದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ