Breaking News

ಬೆಳಗಾವಿ ವೃದ್ಧನ ಡಿಜಿಟಲ್ ಅರೆಸ್ಟ್ ಮಾಡಿ ₹15 ಕೋಟಿ ಲೂಟಿ!

Spread the love

ಬೆಳಗಾವಿ : ಜಿಲ್ಲೆಯಲ್ಲಿ ಸೈಬರ್ ವಂಚಕರು ವೃದ್ಧ ಉದ್ಯಮಿಯನ್ನು ಗುರಿಯಾಗಿಸಿಕೊಂಡು ₹15 ಕೋಟಿ ದೋಚಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಬೆಳಗಾವಿ ನಗರದ ಸಿಇಎನ್ ಠಾಣೆಯಲ್ಲಿ ದಾಖಲಾಗಿದೆ.

ವಂಚಕರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ವಿಡಿಯೋ ಕರೆ ಮಾಡಿ, ನಿಮ್ಮ ಬ್ಯಾಂಕ್ ಖಾತೆ ಮನಿ ಲಾಂಡ್ರಿಂಗ್ ಪ್ರಕರಣದಲ್ಲಿ ಸಿಲುಕಿದೆ ಎಂದು ಬೆದರಿಕೆ ಹಾಕಿ ಭಯ ಹುಟ್ಟಿಸಿದ್ದರು.

ತನಿಖೆ ನಡೆಯುತ್ತಿದೆ ಎಂದು ಹೇಳಿ, ಹಣವನ್ನು ಸುರಕ್ಷತೆಯ ಹೆಸರಿನಲ್ಲಿ ಬೇರೆ ಖಾತೆಗೆ ವರ್ಗಾಯಿಸಿ ಬಳಿಕ ಮರಳಿಸುತ್ತೇವೆ ಎಂದು ನಂಬಿಸಿ ಹಂತ ಹಂತವಾಗಿ ₹15 ಕೋಟಿ ವರ್ಗಾಯಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ನಂತರ ವಂಚಕರ ಸಂಪರ್ಕ ಕಡಿತಗೊಂಡಾಗ ಅನುಮಾನಗೊಂಡ ವೃದ್ಧ ಉದ್ಯಮಿ ಮಾರ್ಚ್ 18ರಂದು ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ. ತಕ್ಷಣ ಕ್ರಮ ಕೈಗೊಂಡ ಪೊಲೀಸರು ವಂಚಕರ ಖಾತೆಗಳನ್ನು ತಡೆಹಿಡಿದು, ₹15 ಕೋಟಿಯಲ್ಲಿ ₹90 ಲಕ್ಷ ಇರುವ ಖಾತೆಯನ್ನು ಫ್ರೀಜ್ ಮಾಡಿದ್ದಾರೆ. ಆರೋಪಿಗಳ ಬಂಧನಕ್ಕಾಗಿ ವಿಶೇಷ ತಂಡ ರಚಿಸಲಾಗಿದ್ದು, ತನಿಖೆ ಮುಂದುವರಿದಿದೆ.

ಇದೇ ರೀತಿಯ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ, ಕಳೆದ ಒಂದೇ ತಿಂಗಳಲ್ಲಿ ಮೂವರು ಹಿರಿಯ ನಾಗರಿಕರು ಇಂತಹ ಮೋಸಕ್ಕೆ ಒಳಗಾಗಿರುವುದು ಆತಂಕಕಾರಿ ಸಂಗತಿ. ಯಾವುದೇ ರೀತಿಯ ಬೆದರಿಕೆ ಕರೆಗಳಿಗೆ ಹೆದರದೇ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ