Breaking News

ಕೇಂದ್ರ ಬಜೆಟ್ : ಜ.30ರಂದು ಪ್ರಧಾನಿ ಮೋದಿ ಸರ್ವಪಕ್ಷ ಸಭೆ

Spread the love

ಹೊಸದಿಲ್ಲಿ : ಫೆಬ್ರವರಿ 1 ರಂದು 2021-2022ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ಈ ಹಿನ್ನೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜನವರಿ 30 ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ.

ಕೊರೋನಾ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿಯವರು ಸರ್ವಪಕ್ಷ ಸಭೆ ನಡೆಸಲಿದ್ದಾರೆಂದು ವರದಿಗಳು ತಿಳಿಸಿವೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಕೇಂದ್ರ ಬಜೆಟ್ 2021-22 ಅನ್ನು ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನವು ಜನವರಿ 29 ರಿಂದ ಫೆಬ್ರವರಿ 15 ರವರೆಗೆ ಮತ್ತು ಮಾರ್ಚ್ 8 ರಿಂದ ಏಪ್ರಿಲ್ 8 ರವರೆಗೆ ಎರಡು ಭಾಗಗಳಲ್ಲಿ ನಡೆಯಲಿದೆ.

ದೇಶದ ಆರ್ಥಿಕತೆ ಐತಿಹಾಸಿಕ ದಾಖಲೆಯ ಮಟ್ಟಕ್ಕೆ ಕುಸಿತ ಕಂಡಿದೆ. ಇಂತಹ ಸಮಯದಲ್ಲಿ ಈ ವರ್ಷ ಬಜೆಟ್​ ಮಂಡನೆಯಾಗುತ್ತಿರುವುದು ಆರ್ಥಿಕತೆಗೆ ಪೂರಕ ವಾತಾವರಣ ನಿರ್ಮಾಣವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇದಲ್ಲದೆ, ಈ ವರ್ಷದ ಬಜೆಟ್​ ಸಚಿವೆ ನಿರ್ಮಾಲಾ ಸೀತಾರಾಮನ್​ ಮಂಡಿಸುತ್ತಿರುವ ಮೂರನೇ ಪೂರ್ಣಾವಧಿ ಬಜೆಟ್​ ಆಗಿರುವ ಕಾರಣ ಸಾಕಷ್ಟು ನಿರೀಕ್ಷೆಗಳೂ ಗರಿಗೆದರಿವೆ


Spread the love

About Laxminews 24x7

Check Also

ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ

Spread the love ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ ಮೈಸೂರು: ಕನ್ನಡಕ್ಕೆ ಮೊದಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ