Breaking News

ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಅದನ್ನು ಪಾಲಿಸಿಲ್ಲ: ಡಿಕೆಶಿ

Spread the love

ಬೆಂಗಳೂರು: ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಶಿಸ್ತು ಪಾಲಿಸಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್  ಅವರು ತಿಳಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದೇ ಪಕ್ಷವಾದರೂ ಶಿಸ್ತು ಬಹಳ ಮುಖ್ಯ. ಆದರೆ ಜಮೀರ್ ಅಹ್ಮದ್‌ ಪಕ್ಷದ ಶಿಸ್ತನ್ನು ಪಾಲಿಸಿಲ್ಲ. ಎಲ್ಲರನ್ನು ವಿಶ್ವಾಸಕ್ಕೆ ಪಡೆದುಕೊಂಡೇ ಅಭ್ಯರ್ಥಿ ಆಯ್ಕೆ ಮಾಡಿದ್ದೆವು. ನಂತರ ನಾವು ಎಲ್ಲಾ ನಾಯಕರೊಂದಿಗೆ ನಿತ್ಯ ಸಂಪರ್ಕದಲ್ಲಿದ್ದೆವು. ನಮ್ಮ ನಾಯಕರ ವರದಿಗಳ ಆಧಾರದ ಮೇಲೆ, ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಜೀರ್ ಅಹ್ಮದ್ ವಿಚಾರದಲ್ಲಿ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಂಡಿರುತ್ತಾರೆ ಎಂದು ಹೇಳಿದರು. 

ನಜೀರ್ ಅವರಿಗೆ ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರಕ್ಕೆ ಹೋಗಿ ಬಂಡಾಯ ಅಭ್ಯರ್ಥಿ ಹಿಂದೆ ಸರಿಯುವಂತೆ ಮಾಡಲು ಪಕ್ಷ ಸೂಚಿಸಿತ್ತು. ಅವರು ಈ ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ. ಅಲ್ಲಿ ಏನಾಗಿದೆ ಎಂದು ನನಗೆ ಇನ್ನು ವರದಿ ಬರಬೇಕಿದೆ ಎಂದರು.

ಜಮೀರ್ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದೇ ಎಂದು ಕೇಳಿದಾಗ, ಇದರ ಬಗ್ಗೆ ನನಗೆ ಮಾಹಿತಿ ಇಲ್ಲ. ಇಂದು ರಾತ್ರಿ ಚೆನ್ನೈಗೆ ಪ್ರಯಾಣ ಮಾಡುತ್ತಿದ್ದು, ಬುಧವಾರ ಚುನಾವಣಾ ಪ್ರಚಾರ ಕಾರ್ಯಕ್ರಮವಿದೆ ಎಂದು ತಿಳಿಸಿದರು.

ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆ ಬಗ್ಗೆ ಶಾಸಕರೊಂದಿಗೆ ಚರ್ಚೆ:
ರಾಜಕಾರಣ ಮಾಡುವಾಗ ನಾವು ನಮ್ಮ ಶಾಸಕರ ಜೊತೆ ಚರ್ಚೆ ಮಾಡಿ ಭವಿಷ್ಯ ರೂಪಿಸುವ ಬಗ್ಗೆ ಚರ್ಚೆ ಮಾಡಬೇಕು. ಯಾರಿಗೆ ಏನು ಹೇಳಬೇಕು? ಯಾರಿಗೆ ಯಾವ ಮಾರ್ಗದರ್ಶನ ನೀಡಬೇಕು? ಪಾಲಿಕೆ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆ ಚರ್ಚೆ ಮಾಡುವುದು ಪಕ್ಷದ ಅಧ್ಯಕ್ಷನಾಗಿ ನನ್ನ ಕರ್ತವ್ಯ. ಈ ಕೆಲಸ ನಾನು ಮಾಡದೇ ಬೇರೆ ಯಾರು ಮಾಡುತ್ತಾರೆ? ಇನ್ನು ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಏನಾಗಿದೆ ಎಂದು ಶಾಸಕರು ವರದಿ ನೀಡುತ್ತಿದ್ದಾರೆ ಎಂದರು.

ಎಚ್ಚರವಾಗಿರಲು ಶಾಸಕರಿಗೆ ಸಲಹೆ:
ಶಾಸಕರು ದೆಹಲಿಗೆ ಹೋಗಿರುವುದು, ಮಂತ್ರಿಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ. ಅವರು ತಮ್ಮ ಬೇಡಿಕೆ ಕೇಳಲಿ. ಆದರೆ ಪಕ್ಷಕ್ಕೆ ಶಿಸ್ತಿನಿಂದ ಇರಬೇಕು ಅಷ್ಟೇ. ಅವರೆಲ್ಲರೂ ನಮ್ಮ ಸಹೋದ್ಯೋಗಿಗಳು. ಹೀಗಾಗಿ ಅವರಿಗೆ ಶಿಸ್ತು ಕಾಪಾಡುವಂತೆ ಮನವಿ ಮಾಡಿದ್ದೇನೆ. ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡುವಾಗ ಎಚ್ಚರಿಕೆಯಿಂದ ಇರಿ ಎಂದು ಸಲಹೆ ನೀಡಿದ್ದೇನೆ ಎಂದು ಹೇಳಿದರು.


Spread the love

About Laxminews 24x7

Check Also

ಮೇ 1 ರಿಂದ ಮಹಾರಾಷ್ಟ್ರದಲ್ಲಿ ಆಟೋ, ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ – ಇಲ್ಲದಿದ್ದರೆ ಲೈಸೆನ್ಸ್‌ ರದ್ದು

Spread the loveಮುಂಬೈ: ರಾಜ್ಯದ ಎಲ್ಲಾ ಆಟೋ  ಮತ್ತು ಟ್ಯಾಕ್ಸಿ ಚಾಲಕರಿಗೆ  ಮರಾಠಿ ಭಾಷಾ ಜ್ಞಾನವನ್ನು ಕಡ್ಡಾಯಗೊಳಿಸಲಾಗಿದೆ. ಚಾಲಕರು ಕಡ್ಡಾಯವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ