Breaking News

ಖಾತೆ ಹಂಚಿಕೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ – ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರ ರಾಮಲಿಂಗಾ ರೆಡ್ಡಿ?

Spread the love

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸಂಪುಟದ ಎಲ್ಲಾ 13 ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ ಹಂಚಿಕೆ ಪ್ರಕ್ರಿಯೆಯಲ್ಲಿ ಅನೇಕ ಸಚಿವರಿಗೆ ತಾವು ಬಯಸಿದ ಖಾತೆ ಸಿಗದಿರುವುದು ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

ಬೆಂಗಳೂರು ನಗರಾಭಿವೃದ್ಧಿ (ಜಿಬಿಎ) ಇಲಾಖೆ ಕೈತಪ್ಪಿದ ಹಿನ್ನೆಲೆ ಸಚಿವ ರಾಮಲಿಂಗಾ ರೆಡ್ಡಿ  ಅವರು ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗ್ತಿದೆ. ‌ಬೆಂಗಳೂರು ನಗರಾಭಿವೃದ್ಧಿ ಕೈತಪ್ಪಿದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಅನ್ನೋ ಮಾಹಿತಿ ʻಪಬ್ಲಿಕ್‌ ಟಿವಿʼಗೆ ಲಭ್ಯವಾಗಿದೆ.

ಖಾತೆ ಹಂಚಿಕೆ ಬೆನ್ನಲ್ಲೇ ಸಚಿವ ರಾಮಲಿಂಗಾ ರೆಡ್ಡಿ, ಸಿಎಂ ಡಿ.ಕೆ ಶಿವಕುಮಾರ್‌ ಅವರಿಗೆ ಕರೆ ಮಾಡಿದ್ದಾರಂತೆ. ಜಲಸಂಪನ್ಮೂಲ ಖಾತೆ ಬೇಡ ಬೆಂಗಳೂರು ಅಭಿವೃದ್ಧಿ ಕೊಡಲು ಆಗದಿದ್ದರೆ ನಾನು ಬೆಳಿಗ್ಗೆ (ಶುಕ್ರವಾರ ಬೆಳಗ್ಗೆ) ರಾಜೀನಾಮೆ ಪತ್ರ ಕಳುಹಿಸುತ್ತೇನೆ ಎಂದು ಹೇಳಿದ್ದಾರಂತೆ.

ಇದಕ್ಕೆ ʻಎಐಸಿಸಿ‌ ಯಿಂದ ಹೇಳಿದ್ದಾರೆ, ಖಾತೆ ಬದಲಾವಣೆಗೆ ಖರ್ಗೆ ಅವರು ಒಪ್ಪುತ್ತಿಲ್ಲ ಎಂದು ರಾಮಲಿಂಗಾ ರೆಡ್ಡಿಗೆ ಸಿಎಂ ಡಿಕೆ ಶಿವಕುಮಾರ್‌ ಹೇಳಿದ್ರಂತೆ. ಆದರೂ ಅಸಮಾಧಾನಗೊಂಡ ರಾಮಲಿಂಗಾ ರೆಡ್ಡಿ ಅವರು, ಹಾಗಾದರೆ ಬೆಳಗ್ಗೆ ರಾಜೀನಾಮೆ ಪತ್ರ ಕಳುಹಿಸುತ್ತೇನೆ ಎಂದು ಕಾಲ್ ಕಟ್ ಮಾಡಿದ್ರಂತೆ.

ಅಸಮಾಧಾನ ಮುಂದುವರಿದರೆ, ಬೆಳಗ್ಗೆ 9 ಗಂಟೆ ಬಳಿಕ ಸಿಎಂ ಗೆ ರಾಜೀನಾಮೆ ಪತ್ರ ಕಳುಹಿಸಿ ಕೊಡುವ ಸಾಧ್ಯತೆಯಿದೆ.

ಯಾರಿಗೆ ಯಾವ ಖಾತೆ?

* ಡಿಕೆ ಶಿವಕುಮಾರ್ – ಮುಖ್ಯಮಂತ್ರಿ – ಹಣಕಾಸು, ಗುಪ್ತಚರ, ಸಹಕಾರ, ಸಿಬ್ಬಂದಿ ಆಡಳಿತ ಸುಧಾರಣೆ
* ಡಾ. ಜಿ ಪರಮೇಶ್ವರ – ಉಪಮುಖ್ಯಮಂತ್ರಿ – ಕಂದಾಯ, ಯುವ ಸಬಲೀಕರಣ
* ಕೃಷ್ಣ ಬೈರೇಗೌಡ – ಬೆಂಗಳೂರು ಅಭಿವೃದ್ದಿ
* ಪ್ರಿಯಾಂಕ್ ಖರ್ಗೆ – ಗೃಹ, ಐಟಿಬಿಟಿ
* ಡಾ.ಯತೀಂದ್ರ ಸಿದ್ದರಾಮಯ್ಯ – ನಗರಾಭಿವೃದ್ದಿ, ಹಿಂದುಳಿದ ಕಲ್ಯಾಣ
* ಯು.ಟಿ ಖಾದರ್ – ಆರೋಗ್ಯ
* ಸತೀಶ್ ಜಾರಕಿಹೊಳಿ – ಲೋಕೋಪಯೋಗಿ
* ಎಂ.ಬಿ ಪಾಟೀಲ್ – ಬೃಹತ್ ಕೈಗಾರಿಕೆ
* ಕೆ.ಜೆ ಜಾರ್ಜ್ – ಇಂಧನ, ಪ್ರವಾಸೋದ್ಯಮ
* ಕೆ.ಎಚ್ ಮುನಿಯಪ್ಪ – ಆಹಾರ
* ರಾಮಲಿಂಗಾ ರೆಡ್ಡಿ – ಜಲಸಂಪನ್ಮೂಲ
* ಈಶ್ವರ್ ಖಂಡ್ರೆ – ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ದಿ
* ಬೈರತಿ ಸುರೇಶ್ – ಸಾರಿಗೆ
* ಡಾ.ಶರಣ ಪ್ರಕಾಶ್ ಪಾಟೀಲ್ – ವೈದ್ಯಕೀಯ ಶಿಕ್ಷಣ


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ