Breaking News

ಮುನವಳ್ಳಿಯಲ್ಲಿ ಅರ್ಹ ಫಲಾನುಭವಿಗಳಿಗೆ ವಿವಿಧ ವೈಯಕ್ತಿಕ ಸೌಲಭ್ಯಗಳ ವಿತರಣೆ.!!

Spread the love

​ನಮ್ಮ ಸವದತ್ತಿ ಯಲ್ಲಮ್ಮ ಕ್ಷೇತ್ರದ ಪ್ರತಿಯೊಬ್ಬ ನಾಗರಿಕನಿಗೂ ಸರ್ಕಾರದ ಜನಕಲ್ಯಾಣ ಯೋಜನೆಗಳು ನೇರವಾಗಿ ತಲುಪಬೇಕು ಎನ್ನುವುದು ನಮ್ಮ ಪ್ರಮುಖ ಧ್ಯೇಯವಾಗಿದೆ.

​ಇಂದು ಮುನವಳ್ಳಿಯ ಪುರಸಭೆ ಕಾರ್ಯಾಲಯದ ಆವರಣದಲ್ಲಿ ನಗರೋತ್ಥಾನ ಹಾಗೂ ಎಸ್.ಎಫ್.ಸಿ. (SFC) ಯೋಜನೆಯಡಿಯಲ್ಲಿ ಮುನವಳ್ಳಿ ಪಟ್ಟಣದ ವಿವಿಧ ವೈಯಕ್ತಿಕ ಸೌಲಭ್ಯಗಳ ಅರ್ಹ ಫಲಾನುಭವಿಗಳಿಗೆ ಅಧಿಕೃತವಾಗಿ ಸೌಲಭ್ಯಗಳನ್ನು ವಿತರಿಸಲಾಯಿತು.

​ರಾಜ್ಯದ ಮಾನ್ಯ ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಈ ಸೌಲಭ್ಯಗಳನ್ನು ತಲುಪಿಸಲಾಗುತ್ತಿದ್ದು, ಸರ್ಕಾರದ ನೆರವುಗಳು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಹಾಗೂ ಸಾಮಾಜಿಕ ಸಬಲೀಕರಣಕ್ಕೆ ಪೂರಕವಾಗಿವೆ.

​ಈ ಸಂದರ್ಭದಲ್ಲಿ ಮುನವಳ್ಳಿ ಪುರಸಭೆಯ ಅಧ್ಯಕ್ಷರಾದ ಶ್ರೀ ಈಶ್ವರ ಅಂ. ಕರೀಕಟ್ಟಿ, ಪುರಸಭೆಯ ಸರ್ವ ಸದಸ್ಯರು, ಮುಖ್ಯಾಧಿಕಾರಿಗಳು, ಸಿಬ್ಬಂದಿ ವರ್ಗದವರು, ಸ್ಥಳೀಯ ಮುಖಂಡರು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಡ್ಯೂಪ್ಲಿಕೇಟ್ ಕೀ ಬಳಸಿ ಐಷಾರಾಮಿ ಕಾರುಗಳ ಕಳ್ಳತನ – ಕರ್ನಾಟಕದಿಂದ ರಾಜಸ್ಥಾನವರೆಗೆ ‘ಕಾರ್‌ ಕಳ್ಳರ’ ಜಾಲ; ಇಬ್ಬರು ಅರೆಸ್ಟ್‌

Spread the loveಬೆಂಗಳೂರು: ಡ್ಯೂಪ್ಲಿಕೇಟ್ ಕೀ ಹಾಗೂ ಅತ್ಯಾಧುನಿಕ ಉಪಕರಣಗಳನ್ನ ಬಳಸಿ ದೇಶದ ವಿವಿಧೆಡೆ ಐಷಾರಾಮಿ ಕಾರುಗಳನ್ನು ಕಳ್ಳತನ ಮಾಡಿ, ರಾಜಸ್ಥಾನದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ