Breaking News

ಕಳ್ಳಬಟ್ಟಿ ನಿರ್ಮೂಲನೆಗೆ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಧಿಕಾರಿ ಸಂಗಪ್ಪ ಎಂ. ಹೇಳಿಕೆ

Spread the love

ಬಾಗಲಕೋಟೆ: ಕಳ್ಳಬಟ್ಟಿ ಸಾರಾಯಿ ತಯಾರಿ, ಸಾಗಾಟ ಮತ್ತು ಮಾರಾಟ ಸಂಪೂರ್ಣವಾಗಿ ತಡೆಗಟ್ಟಲು ಪರಿಣಾಮಕಾರಿಯಾಗಿ ಜಾರಿ ಮತ್ತು ತನಿಖಾ ಕಾರ್ಯಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಸಂಗಪ್ಪ ಎಂ.ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ  ಕಳ್ಳಬಟ್ಟಿ ಸಾರಾಯಿ ನಿರ್ಮೂಲನೆ ಕುರಿತು ರಚಿಸಲಾದ ಜಿಲ್ಲಾ ಮಟ್ಟದ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,  ಕಳ್ಳಬಟ್ಟಿ ಸಾರಾಯಿ ನಿರ್ಮೂಲನೆಗೆ ಸಂಬಂಧಪಟ್ಟ ಇಲಾಖೆಗಳ ಜಂಟಿ ಸಹಭಾಗಿತ್ವದಲ್ಲಿ ಕಾರ್ಯಾಚರಣೆ, ಅರಿವು ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ಗ್ರಾಮ ಮಟ್ಟದಲ್ಲಿ ಅನುಮಾನಾಸ್ಪದ  ಕಳ್ಳಬಟ್ಟಿ ಚಟುವಟಿಕೆಗಳ ಬಗ್ಗೆ ತಕ್ಷಣ ಮಾಹಿತಿ ಸಂಗ್ರಹಿಸುವ ಕೆಲಸವಾಗಬೇಕು ಎಂದರು.
 ಕಳ್ಳಬಟ್ಟಿ ಸಾರಾಯಿ ಸೇವನೆಯಿಂದ ಜನರ ಆರೋಗ್ಯದ ಬಗ್ಗೆ ಗಂಭೀರವಾದ ಹಾನಿಯಾಗುತ್ತಿದ್ದು, ಇಂತಹ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು. ಸಾರ್ವಜನಿಕರೂ ಸಹಕರಿಸುವ ಮೂಲಕ ಮಾಹಿತಿ ನೀಡಲು ಮುಂದಾಗಬೇಕಿದೆ. ಅಕ್ರಮ ಚಟುವಟಿಕೆಗಳ ಬಗ್ಗೆ ನಿರಂತರ ಪರಿಶೀಲನೆ ನಡೆಸುವ ಕೆಲಸವಾಗಬೇಕು ಅಂದಾಗ ಮಾತ್ರ  ಕಳ್ಳಬಟ್ಟಿ ಸಾರಾಯಿ ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಜಿಪಂ ಸಿಇಒ ಶಶಿಧರ ಕುರೇರ ಮಾತನಾಡಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಮತ್ತು ಸ್ವಸಹಾಯ ಸಂಘಗಳ ಸಹಯೋಗದೊಂದಿಗೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ  ಕಳ್ಳಬಟ್ಟಿ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು. ಇದರ ಜೊತೆಗೆ ಇಂತಹ ಚಟುವಟಿಕೆಗಳನ್ನು ನಡೆಸುವವರಿಗೆ ಕಾನೂನಿನಡಿ ಇರುವ ಶಿಕ್ಷೆ ಹಾಗೂ ದಂಡದ ಬಗ್ಗೆ ತಿಳಿಸುವ ಕಾರ್ಯವಾಗಬೇಕು. ಗ್ರಾಮ ಸಭೆಗಳಲ್ಲಿ ಇದರ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಕೆಲಸ ಮಾಡಲು ತಿಳಿಸಿದರು.
ಅಬಕಾರಿ ಉಪ ಆಯುಕ್ತ ತಿಪ್ಪೆಸ್ವಾಮಿ ಡಿ.ಎನ್. ಮಾತನಾಡಿ, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಏಪ್ರೀಲ್-2025 ರಿಂದ ಜನವರಿ-2026 ವರೆಗೆ ಒಟ್ಟು 1341  ಕಳ್ಳಬಟ್ಟಿಗಳ ಸಾರಾಯಿ ಅಡ್ಡೆಗಳ ಮೇಲೆ ದಾಳಿ ನಡೆಸಿದ್ದು, 110 ಪ್ರಕರಣಗಳನ್ನು ದಾಖಲಿಸುವ ಮೂಲಕ 110 ಜನರನ್ನು ಬಂಧಿಸಲಾಗಿದೆ. 799 ಲೀಟರ್  ಕಳ್ಳಬಟ್ಟಿ ಸಾರಾಯಿ, 1086 ಕೆಜಿ ಬೆಲ್ಲದ ಕೊಳೆ ಜೊತೆಗೆ 1 ಆಟೋ, 33 ಟಿಡಬ್ಲೂ, ಒಂದು ಬೈಸಿಕಲ್ ವಶಕ್ಕೆ ಪಡೆಯಲಾಗಿದೆ. 6 ಪ್ರಕರಣಗಳಿಗೆ 11 ಆರೋಪಿಗಳಿಗೆ ಪ್ರತಿಯೊಬ್ಬರಿಗೂ 1 ವರ್ಷ ಕಠಿಣ ಶಿಕ್ಷೆ, 10 ಸಾವಿರ ರೂ.ಗಳ ದಂಡವನ್ನು ನ್ಯಾಯಾಲಯ ವಿಧಿಸಿದೆ. ಅಲ್ಲದೆ ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ಇಲ್ಲಿಯವರೆಗೆ 2.199 ಕೆಜಿ ಗಾಂಜಾ, 11 ಹಸಿ ಗಾಂಜಾ ಗಿಡಗಳು, 1 ದ್ವಿಚಕ್ರ ವಾಹನ, 1 ಮೊಬೈಲ್ ಜೊತೆಗೆ 7 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸಭೆಗೆ ತಿಳಿಸಿದರು.
ಎಸ್‌ಪಿ ಸಿದ್ದಾರ್ಥ ಗೋಯಲ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸ್ವಪ್ನಿಲ್ ಅಹಿರೆ, ಅಬಕಾರಿ ಅಧೀಕ್ಷಕ ಹನಮಪ್ಪ ಭಜಂತ್ರಿ, ಆರೋಗ್ಯ ಇಲಾಖೆಯ ಶಿವನಗೌಡ ಪಾಟೀಲ ಮತ್ತಿತರರಿದ್ದರು.

Spread the love

About Laxminews 24x7

Check Also

ಬಾಗಲಕೋಟೆಯಲ್ಲಿ ಪರಿಸ್ಥಿತಿ ಪೂರ್ಣ ನಿಯಂತ್ರಣಕ್ಕೆ ಬಂದಿದೆ: ಡಾ.ಪರಮೇಶ್ವರ್‌

Spread the loveಬೆಂಗಳೂರು: ‘ಬಾಗಲಕೋಟೆಯಲ್ಲಿ ಮೆರವಣಿಗೆ ಬಗ್ಗೆ ಸ್ಥಳೀಯವಾಗಿ ನೋಡಿಕೊಂಡು ತೀರ್ಮಾನ ಮಾಡುವಂತೆ ಸೂಚಿಸಿದ್ದೇನೆ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ