Breaking News

ಜಿಲ್ಲಾಮಟ್ಟದ ಗ್ಯಾರಂಟಿ ಕಾರ್ಯಾಗಾರ ಹಾಗೂ ಉತ್ಸವ ಸಿದ್ಧತೆ ಪರಿಶೀಲನೆ

Spread the love

ಬಾಗಲಕೋಟೆ: ನವನಗರದ ಜಿಲ್ಲಾ ಕಲಾ ಭವನದಲ್ಲಿ ಫೆ. 20ರಂದು ಜಿಲ್ಲಾಮಟ್ಟದ ಗ್ಯಾರಂಟಿ ಕಾರ್ಯಾಗಾರ ಹಾಗೂ ಉತ್ಸವ ಜರುಗಲಿದ್ದು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಬುಧವಾರ ಸಿದ್ಧತಾ ಕಾರ್ಯ ಪರಿಶೀಲಿಸಿದರು.
ಕಾರ್ಯಕ್ರಮದ ಮುಖ್ಯ ವೇದಿಕೆ, ಊಟದ ವ್ಯವಸ್ಥೆಯ ಸ್ಥಳ ಪರಿಶೀಲನೆ ಹಾಗೂ ಕಲಾ ಭವನದ ಮುಖ್ಯದ್ವಾರದ ಪಕ್ಕದಲ್ಲಿ ಹೆಚ್ಚುವರಿಯಾಗಿ ಬಂದ ಜನರಿಗೆ ಕಾರ್ಯಕ್ರಮ ವೀಕ್ಷಣೆಗೆ ಎಲ್‌ಇಡಿ ವ್ಯವಸ್ಥೆ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಯೋಜನೆಗಳ ಸಂಪೂರ್ಣ ಮಾಹಿತಿಯುಳ್ಳ ಮಳಿಗೆಗಳನ್ನು ಅಚ್ಚುಕಟ್ಟಾಗಿ ಸಿದ್ಧಪಡಿಸಲು ತಿಳಿಸಿದರು.
ಕಾರ್ಯಕ್ರಮಕ್ಕೆ ಒಂದು ದಿನ ಮಾತ್ರ ಬಾಕಿ ಉಳಿದಿದ್ದು, ಸಿದ್ಧತೆಗಳನ್ನು ಪೂರ್ಣಗೊಳಿಸಲು ಸೂಚನೆ ನೀಡಿದರು. ಉತ್ಸವಕ್ಕೆ ಆಗಮಿಸುವ ಪ್ರತಿಯೊಬ್ಬ ಫಲಾನುಭವಿಗಳಿಗೆ ಕೂಡುವ ವ್ಯವಸ್ಥೆ ಆಗಬೇಕು. ಸಮಯಕ್ಕೆ ಫಲಾನುಭವಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಮಧ್ಯಾಹ್ನದ ಊಟದ ವ್ಯವಸ್ಥೆ ಸೇರಿ ಇತರೆ ಕೆಲಸಗಳು ಅಚ್ಚುಕಟ್ಟಾಗಿ ನಡೆಯಬೇಕು. ಬಿಸಿಲು ಹೆಚ್ಚಾಗಿರುವುದರಿಂದ ಊಟದ ಸ್ಥಳದಲ್ಲಿ ಶಾಮಿಯಾನ ಹಾಕಲು ತಿಳಿಸಿದರು. ಕಲಾ ಭವನದ ಸುತ್ತಲೂ ಸ್ವಚ್ಛತೆ ಕೈಗೊಳ್ಳಲು ನಗರಸಭೆ ಪೌರಾಯುಕ್ತರಿಗೆ ಸೂಚನೆ ನೀಡಿದರು.
ಜಿ.ಪಂ. ಉಪ ಕಾರ್ಯದರ್ಶಿ ಎನ್.ವೈ. ಬಸರಿಗಿಡದ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ. ಪ್ರಭಾಕರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ ಎಂ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು, ಯೋಜನಾ ನಿರ್ದೇಶಕ ಎಸ್.ಎಂ. ಕಾಂಬಳೆ, ಹೆಸ್ಕಾಂ ಅಧಿಕಾರಿಗಳು ಸೇರಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನದ ಅಧ್ಯಕ್ಷ ಎಸ್.ಎಂ. ರಾಂಪೂರ ಮತ್ತಿತರರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಜಮಖಂಡಿ ಆಸ್ಪತ್ರೆಗೆ ಡಿಸಿ ಸಂಗಪ್ಪ ದಿಢೀರ್ ಭೇಟಿ: ದೂರು ನೀಡಿದ್ದ ಸಾರ್ವಜನಿಕರ ಸಮ್ಮುಖದಲ್ಲೇ ಅಧಿಕಾರಿಗಳಿಗೆ ತರಾಟೆ!

Spread the loveಬಾಗಲಕೋಟೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಇಂದು ಜಮಖಂಡಿ ಮತ್ತು ಮುಧೋಳ ತಾಲ್ಲೂಕಿನ ವಿವಿಧ ಸರ್ಕಾರಿ ಕಚೇರಿ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ