Breaking News

ಸೆ.11 ರಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ

Spread the love

ಬೆಳಗಾವಿ: ರಾಜ್ಯ ಸರ್ಕಾರದ ಸೂಚನೆಯನ್ವಯ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಸೂಕ್ತ ಪರಿಹಾರ ನೀಡುವ ಉದ್ದೇಶದಿಂದ ಸೆಪ್ಟೆಂಬರ 5 ರಂದು ಖಾನಾಪುರ ತಾಲೂಕಿನ ಲೋಕಮಾನ್ಯ ಭವನದಲ್ಲಿ ನಿಗದಿಯಾಗಿದ್ದ ಪ್ರಜಾ ಸೇವೆ ಆಂದೋಲನ ಸಭೆಯನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಿ ದಿನಾಂಕ:11-09-2026 ರ ಶುಕ್ರವಾರ ಯರಗಟ್ಟಿಯ ಶ್ರೀಶೈಲ ಮಲ್ಲಿಕಾರ್ಜುನ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಮರು ನಿಗದಿಪಡಿಸಲಾಗಿದೆ.

ಸಭೆಯಲ್ಲಿ ಸ್ಥಳೀಯ ಶಾಸಕರು ಉಪಸ್ಥಿತರಿರಲಿದ್ದು, ಯರಗಟ್ಟಿ/ಸವದತ್ತಿ ತಾಲೂಕಿನ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಸಲ್ಲಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಮಹರ್ಷಿ ವಾಲ್ಮೀಕಿ ನಮ್ಮ ಜೀವನಕ್ಕೆ ದಾರಿದೀಪ: ಎನ್. ಬಿ.ಪಾಟೀಲ

Spread the loveಮಹಾಲಿಂಗಪುರ: ರಾಮಾಯಣ ಮಹಾಕಾವ್ಯದ ಮೂಲಕ ಸತ್ಯ, ಧರ್ಮ, ತ್ಯಾಗ, ಕರ್ತವ್ಯ ಮತ್ತು ಮಾನವೀಯ ಮೌಲ್ಯಗಳ ಮಹತ್ವವನ್ನು ಜಗತ್ತಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ