Breaking News

ಬಸವಾದಿ ಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ವಿಭಾಗೀಯ ಪೀಠ ಷರತ್ತುಬದ್ಧ ಅನುಮತಿ

Spread the love

ಕಲಬುರಗಿ/ಬೀದರ್: ಜೂನ್ 28ರಂದು ಬೀದರ್‌ನ ಬಸವಕಲ್ಯಾಣದಲ್ಲಿ ನಡೆಯಲಿರುವ ಬಸವಾದಿ ಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ಕರ್ನಾಟಕ ಹೈಕೋರ್ಟ್‌ ಕಲಬುರಗಿ ವಿಭಾಗೀಯ ಪೀಠವು ಷರತ್ತುಬದ್ಧ ಅನುಮತಿ ನೀಡಿದೆ.

ಕಾರ್ಯಕ್ರಮದಲ್ಲಿ ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಭಾಗವಹಿಸಲು ಅವಕಾಶ ನೀಡಿದ್ದು, ಅವರು ಭಾಷಣ ಮಾಡದಂತೆ ಅಫಿಡವಿಟ್ ಸಲ್ಲಿಸಿರುವ ಹಿನ್ನೆಲೆ ನ್ಯಾಯಾಲಯ ಈ ಅನುಮತಿ ನೀಡಿದೆ. ಕಾರ್ಯಕ್ರಮದಲ್ಲಿ ಗರಿಷ್ಠ 2,500 ಜನರು ಭಾಗವಹಿಸಬಹುದೆಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಸಮಾವೇಶದ ವೇಳೆ ಯಾವುದೇ ರೀತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಕಾರ್ಯಕ್ರಮವನ್ನು ನಡೆಸಬೇಕು. ಒಂದು ವೇಳೆ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದರ ಸಂಪೂರ್ಣ ಹೊಣೆಗಾರಿಕೆಯನ್ನು ಕಾರ್ಯಕ್ರಮದ ಆಯೋಜಕರೇ ಹೊರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಕನ್ನೇರಿಯ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಪರವಾಗಿ ಹಿರಿಯ ವಕೀಲ ವೆಂಕಟೇಶ್ ದಳವಾಯಿ ವಾದ ಮಂಡಿಸಿದರೆ, ರಾಜ್ಯ ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು. ಎರಡೂ ಕಡೆಯ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರು ಸಮಾವೇಶಕ್ಕೆ ಷರತ್ತುಬದ್ಧ ಅನುಮತಿ ನೀಡಿ, ಆದೇಶ ಹೊರಡಿಸಿದ್ದಾರೆ.


Spread the love

About Laxminews 24x7

Check Also

ಮತ್ತೆ ಸುಪ್ರೀಂ ಮೆಟ್ಟಿಲೇರಿದ ದರ್ಶನ್ – ಒಂದು ವರ್ಷ ಜಾಮೀನು ಅರ್ಜಿ ಸಲ್ಲಿಸದಂತೆ ನೀಡಿದ್ದ ಆದೇಶ ಮಾರ್ಪಾಡಿಗೆ ಮನವಿ

Spread the loveನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮತ್ತೊಮ್ಮೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಒಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ