ಬೆಂಗಳೂರು: ನಗರದಲ್ಲಿ ದೀಪಾವಳಿ ಪಟಾಕಿ ಅವಘಡಕ್ಕೆ ಇಂದು ಕೂಡ 80 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪಟಾಕಿ ಸಿಡಿದು ಗರ್ಭಿಣಿ ಗಂಭೀರ ಗಾಯಗೊಂಡಿದ್ದಾರೆ.
ಪಟಾಕಿಯಿಂದ ಗಾಯಗೊಂಡು ನಾರಾಯಣ ನೇತ್ರಾಲಯದಲ್ಲಿ ದಾಖಲಾದವರ ಸಂಖ್ಯೆ 48 ಕ್ಕೆ ಏರಿಕೆಯಾಗಿದೆ. 22 ಮಂದಿ ವಯಸ್ಕರು, 26 ಮಕ್ಕಳು ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರಿಗೆ ಶಸ್ತ್ರಚಿಕಿತ್ಸೆ ನೀಡಲಾಗಿದೆ.
ಮತ್ತೊಂದು ಕಡೆ ದೇಹ ಸುಟ್ಟುಕೊಂಡವರ ಸಂಖ್ಯೆಯೂ ಏರಿಕೆಯಾಗಿದೆ. ವಿಕ್ಟೋರಿಯಾ ಸುಟ್ಟಗಾಯ ವಿಭಾಗದಲ್ಲಿ ರೋಗಿಗಳು ದಾಖಲಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 8 ಜನರಿಗೆ ಸುಟ್ಟು ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರಲ್ಲಿ ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ. 8 ವರ್ಷದ ಬಾಲಕನಿಗೂ ಗಂಭೀರ ಗಾಯವಾಗಿ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಮಿಂಟೋ ಆಸ್ಪತ್ರೆಯಲ್ಲಿ ಗಾಯಗೊಂಡವರ ಸಂಖ್ಯೆ 36 ಕ್ಕೆ ಏರಿಕೆಯಾಗಿದೆ. ಇಂದು ಬೆಳಗ್ಗೆಯಿಂದ ಇಲ್ಲಿಯ ತನಕ 8 ಜನ ಗಾಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
Laxmi News 24×7