Breaking News

ಮಾಜಿ ಸಚಿವ ವೆಂಕಟರಮಣಪ್ಪ ನಿಧನ

Spread the love

ತುಮಕೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಚಿವ ವೆಂಕಟರಮಣಪ್ಪ ಶುಕ್ರವಾರ (ಇಂದು) ನಿಧನರಾಗಿದ್ದಾರೆ

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ  ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದು, ಪುತ್ರ ಶಾಸಕ ಹೆಚ್‌.ವಿ ವೆಂಕಟೇಶ್‌, ಕುಮಾರಸ್ವಾಮಿ, ಪುತ್ರಿ ಪದ್ಮಾವತಿ ಅವರನ್ನ ಅಗಲಿದ್ದಾರೆ.

ಅನಾರೋಗ್ಯಕ್ಕೀಡಾಗಿದ್ದ ವೆಂಕಟರಮಣಪ್ಪ ಅವರನ್ನ ಬೆಂಗಳೂರಿನ ಪೋರ್ಟೀಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ (ಇಂದು) ಬೆಳಗ್ಗಿನ ಜಾವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ವೆಂಕಟರಮಣಪ್ಪ ಅವರು 2008 ರ ಅವಧಿಯಲ್ಲಿ ರೇಷ್ಮೆ ಮತ್ತು ಸಣ್ಣ ಕೈಗಾರಿಕಾ ಸಚಿವರಾಗಿ, 2018 ರಲ್ಲಿ ಕಾರ್ಮಿಕ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಒಟ್ಟು ನಾಲ್ಕು ಬಾರಿ ಶಾಸಕರಾಗಿ ಚುನಾಯಿತರಾಗಿದ್ದರು.

ಪಟ್ಟಟ್ಟಣದ ಗುರುಭವನದಲ್ಲಿ ಇಂದು ಮಧ್ಯಾಹ್ನ ಮೃತರ ಪಾರ್ಥೀವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ಇಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ದಿಲ್ಲಿಯಲ್ಲಿ ಬಿಡಾರ ಹೂಡಿರುವ ಶಾಸಕರನ್ನ ಹೈಕಮಾಂಡ್ ಮರಳಿ ರಾಜ್ಯಕ್ಕೆ ಕಳಿಸಬೇಕು: ಯತ್ನಾಳ್

Spread the loveವಿಜಯಪುರ: ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ಬಿಡಾರ ಹೂಡಿರುವವರನ್ನ ಕಾಂಗ್ರೆಸ್‌ ಹೈಕಮಾಂಡ್‌ ಮರಳಿ ರಾಜ್ಯಕ್ಕೆ ಕಳುಹಿಸಬೇಕು ಎಂದು ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ