Breaking News
Home / ಜಿಲ್ಲೆ / ಬೆಂಗಳೂರು / ಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೂರವಾಣಿಯಲ್ಲಿ ಜಮೀರ್ ಅವರನ್ನು ತರಾಟೆ…….

ಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೂರವಾಣಿಯಲ್ಲಿ ಜಮೀರ್ ಅವರನ್ನು ತರಾಟೆ…….

Spread the love

ಬೆಂಗಳೂರು, ಏ.21- ಪಾದರಾಯನಪುರ ದುರ್ಘಟನೆಯ ಬಗ್ಗೆ ಶಾಸಕ ಜಮೀರ್ ಅಹಮದ್ ಖಾನ್ ವಿಷಾದ ವ್ಯಕ್ತ ಪಡಿಸಿದ್ದು, ಜಾತಿ ಧರ್ಮ ಮರೆತು ಕೊರೊನಾ ವಿರುದ್ಧ ಒಟ್ಟಾಗಿ ಹೋರಾಟ ಮಾಡೋಣ ಎಂದು ಮನವಿ ಮಾಡಿದ್ದಾರೆ.ನಿನ್ನೆಯ ‍ಘಟನೆಯ ಬಗ್ಗೆ ಮುಸ್ಲಿಂ ಸಮುದಾಯದ ಮುಖಂಡರ ಜೊತೆ ತುರ್ತು ಸಭೆ ನಡೆಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೂರವಾಣಿಯಲ್ಲಿ ಜಮೀರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಹಾಗಾಗಿ ಇಂದು ಬೆಳಗ್ಗೆ ಟ್ವಿಟ್ ಮೂಲಕ ಜಮೀರ್ ಕೆಲ ಸ್ಪಷ್ಟನೆಗಳನ್ನು ನೀಡಿದ್ದಾರೆ.

ಪಾದರಾಯನಪುರದಲ್ಲಿ ಇಂಥದ್ದೊಂದು ಘಟನೆ ನಡೆದಿದೆ ಎಂದು ನನ್ನಿಂದ ಇನ್ನೂ ನಂಬಲು ಸಾಧ್ಯವಾಗುತ್ತಿಲ್ಲ, ತಮ್ಮನ್ನೇ ಉಳಿಸಲು ಬಂದವರ ಮೇಲೆ ಜನ ಹಲ್ಲೆಗೆ ಮುಂದಾಗಿರುವುದು ಅತ್ಯಂತ ನೋವಿನ ಸಂಗತಿ. ನಾನು ಯಾರಿಗೂ ನನ್ನ ಅಪ್ಪಣೆ ಪಡೆದು ಚಾಮರಾಜಪೇಟೆಗೆ ಬರಬೇಕು ಎಂದು ಎಲ್ಲಿಯೂ ಹೇಳಿಲ್ಲ, ಹೇಳುವುದು ಇಲ್ಲ.

ನನ್ನ ಕ್ಷೇತ್ರವೂ ಇತರ ಕ್ಷೇತ್ರಗಳಂತೆ ಒಂದು ಸಾಮಾನ್ಯ ಕ್ಷೇತ್ರ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡಿರುವುದಕ್ಕೆ ಸಾಕಷ್ಟು ನೋವಾಗಿದೆ ಎಂದಿದ್ದಾರೆ.
ಲಾಕ್‌ಡೌನ್ ಪ್ರಾರಂಭವಾದ ದಿನದಿಂದ ಹಿಡಿದು ನಿನ್ನೆಯ ಸಂಜೆಯವರೆಗೂ ಹಗಲು ರಾತ್ರಿಯೆನ್ನದೆ ನಾನು ಕ್ಷೇತ್ರದಲ್ಲಿದ್ದು, ಅಧಿಕಾರಿಗಳಿಗೆ ಸ್ಪಂದಿಸಿ, ಜನರು ಮತ್ತು ಸರ್ಕಾರದ ನಡುವಿನ ಕೊಂಡಿಯಾಗಿ ನಿಂತು ಯಾವುದೇ ರೀತಿಯ ಗೊಂದಲ ಆಗದಂತೆ ನೋಡಿಕೊಂಡಿದ್ದೆನೆ.

ನಗರದಲ್ಲಿ‌ಕೊರೊನಾ ನಿಯಂತ್ರಣಕ್ಕೆ ಬರಬೇಕು ಎಂಬುದು ಎಲ್ಲರಂತೆ ನನ್ನ ಬಯಕೆ ಕೂಡ. ಆದರೆ ನಿನ್ನೆಯ ಘಟನೆ ನಡೆಯಬಾರದಿತ್ತು, ನಡೆದಿದೆ. ಅದಕ್ಕೆ ನನ್ನ ವಿಷಾದವಿದೆ. ತಪ್ಪಿತಸ್ಥರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿ. ಮುಂದೆ ಇಂತಹ ಘಟನೆಗಳು ನನ್ನ ಕ್ಷೇತ್ರ ಮಾತ್ರವಲ್ಲ, ಇಡೀ ರಾಜ್ಯದಲ್ಲಿ ಎಲ್ಲಿಯೂ ನಡೆಯದಂತೆ ಎಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದು ಮನವಿ ಮಾಡಿದ್ದಾರೆ.

ನನ್ನ ಜನ ಈ ರೀತಿ ವರ್ತಿಸುತ್ತಾರೆ ಎಂದು ನಾನು ಎಂದು ಭಾವಿಸಿರಲಿಲ್ಲ. ಯಾರೋ ಒಂದಷ್ಟು ಜನರ ದುರ್ವರ್ತನೆಗೆ ಇಡೀ ಸಮುದಾಯವನ್ನು ದೂರುವುದು ಕೂಡ ಸರಿಯಲ್ಲ. ಧರ್ಮಾತೀತವಾಗಿ ಕೊರೊನಾ ವಿರುದ್ಧ ದೇಶ ಹೋರಾಡುತ್ತಿದೆ, ಇದು ಒಂದಾಗಬೇಕಾದ ಸಮಯವೇ ಹೊರತು ಸಮಾಜ ಒಡೆಯುವ ಸಮಯವಲ್ಲ ಎಂದಿದ್ದಾರೆ.

ಮಾಧ್ಯಮದ ಸ್ನೇಹಿತರು ಎಲ್ಲರೂ ಒಟ್ಟಾಗಿ ನನ್ನ ಮೇಲೆ ಮುಗಿಬಿದ್ದಿದ್ದರಿಂದ ಅನಿವಾರ್ಯವಾಗಿ ಉತ್ತರಿಸದೆ ಹೊರ ನಡೆಯಬೇಕಾಯಿತು. ಘಟನೆಯ ಬಗ್ಗೆ ಮಾಧ್ಯಮ ಮಿತ್ರರಿಗಿದ್ದ ಆಕ್ರೋಶ, ನೋವಿನ ಅರಿವು ನನಗಿದೆ. ಇಂತಹ ಒಂದು ದುರ್ಘಟನೆ ನಡೆದ ನಂತರ ಈ ರೀತಿ ಆಕ್ರೋಶಭರಿತ ಮಾತುಗಳು ಬರುವುದು ಸಹಜ.

ಈ ಘಟನೆ ಸಂಭವಿಸದಂತೆ ಕೈಗೊಳ್ಳಬಹುದಾಗಿದ್ದ ಮುಂಜಾಗ್ರತಾ ಕ್ರಮಗಳ ಬಗ್ಗೆ ನಾನು ಆಡಿದ ಮಾತುಗಳಿಗೆ ಬೇರೆಯದೇ ಅರ್ಥ ನೀಡಿ ಕೆಲ ಸಚಿವರು ನನ್ನ ವಿರುದ್ಧ ಏನೇನು ಪದಗಳನ್ನು ಬಳಸಬಹುದೋ ಅವೆಲ್ಲವನ್ನೂ ಬಳಸಿ ನನ್ನನ್ನು ಹಾಡಿ ಹೊಗಳಿದ್ದಾರೆ, ಅದನ್ನು ಕೇಳಿ ಸಂತೋಷವಾಗಿದೆ. ಅವರಿಗೂ ಧನ್ಯವಾದ ಎಂದು ವ್ಯಂಗ್ಯವಾಗಿದ್ದಾರೆ.

ನಾನು ಏನು ಹೇಳಲು ಬಯಸಿದ್ದೆ ಅದನ್ನು ಹೇಳಲು ಎಲ್ಲಿಯೂ ನನಗೆ ಅವಕಾಶ ಸಿಗಲಿಲ್ಲ. ಹಿಂದೂ ಮುಸ್ಲಿಂ ಇರಲಿ ಎಲ್ಲರೂ ಒಂದಾಗಿ ಬಾಳಬೇಕು, ಎಲ್ಲರೂ ಒಂದೇ ತಾಯಿಯ ಮಕ್ಕಳು. ನಮ್ಮ ದೇಶವನ್ನು, ರಾಜ್ಯವನ್ನು ಕೊರೊನಾದಿಂದ ಕಾಪಾಡಬೇಕು. ಇದಕ್ಕೆ ನನ್ನ ಕ್ಷೇತ್ರದ ಜನರ ಸಂಪೂರ್ಣ ಸಹಕಾರ ದೊರೆಯಲಿದೆ ಎಂದಿದ್ದಾರೆ.

ಆ ಒಂದು ಘಟನೆಯಿಂದ ನನ್ನ ಹೆಸರಿಗೆ ಮಸಿ ಬಳಿಯಲು ಎಷ್ಟೇ ಪ್ರಯತ್ನಿಸಿದರೂ ನಾನು ಜನಸೇವೆಯಿಂದ ಹಿಂದೆ ಸರಿಯುವವನಲ್ಲ. ಮಾನವೀಯತೆಯೇ ನನ್ನ ಧರ್ಮ. ಹಣ, ಅಧಿಕಾರ ಯಾವುದೂ ಶಾಶ್ವತವಲ್ಲ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲರೂ ನನ್ನ ಸಹೋದರ, ಸಹೋದರಿಯರಿದ್ದಂತೆ. ಇವರೆಲ್ಲರ ಜೊತೆ ಸದಾ ಇರುತ್ತೇನೆ ಎಂದು ಸ್ಪಷ್ಟ ಪಡಿಸಿದ್ದಾರೆ.

ಮುಂದೆ ಇಂಥ ಘಟನೆ ಮತ್ತೆ ಮರುಕಳಿಸದಂತೆ ನೋಡಿಕೊಳ್ಳಲು ಅಗತ್ಯ ಮುಂಜಾಗ್ರತೆ ವಹಿಸಲಾಗುತ್ತದೆ. ನನ್ನ ಕ್ಷೇತ್ರದ ಜನತೆ ಎಂದಿನಂತೆ ಮುಂದೆಯೂ ಸರ್ಕಾರ, ವೈದ್ಯಕೀಯ ಸಿಬ್ಬಂದಿಗಳಿಗೆ ಸಂಪೂರ್ಣ ಸಹಕಾರ ನೀಡುತ್ತಾರೆ ಎಂಬ ಭರವಸೆ ನನಗಿದೆ. ನಮ್ಮೆಲ್ಲರ ಗುರಿ ಕೊರೊನಾ ನಿರ್ಮೂಲನೆಯೊಂದೇ ಆಗಿರಲಿ ಎಂದು ಅವರು ಆಶಿಸಿದ್ದಾರೆ,

 


Spread the love

About Laxminews 24x7

Check Also

ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಬಿಗ್ ಶಾಕ್ :ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆ

Spread the loveಬೆಂಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಲ್ಬುರ್ಗಿ ಜಿಲ್ಲೆಯ ವಿಜಯಪುರ ತಾಲ್ಲೂಕಿನ ಬಿಜೆಪಿಯ ಪರಾಜಿತ ಅಭ್ಯರ್ಥಿ ಮಲಿಕಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ