Breaking News

ಕಬ್ಬು ಬೆಳೆಗಾರರ ಹಿತ ಕಾಯುವಲ್ಲಿ ಡಿಕೆಶಿ ಸರ್ಕಾರ ವಿಫಲ: ಕೋಡಿಹಳ್ಳಿ ಚಂದ್ರಶೇಖರ್

Spread the love

ಬೆಳಗಾವಿ: ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸುವಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರೈತರ ಹಿತದೃಷ್ಟಿಯಿಂದ ನಿರ್ಧಾರ ಕೈಗೊಳ್ಳುವ ಬದಲು ಕಾರ್ಖಾನೆ ಮಾಲೀಕರ ಪರವಾಗಿ ಸರ್ಕಾರ ನಡೆದುಕೊಳ್ಳುತ್ತಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ವಾಗ್ದಾಳಿ ನಡೆಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತ ಹೋರಾಟಗಾರರ ಮೂಲಕವೇ ಸಕ್ಕರೆ ಕಾರ್ಖಾನೆ ಮಾಲೀಕರ ಬೇಡಿಕೆಗಳನ್ನು ಪ್ರತಿಪಾದಿಸುವ ಪ್ರಯತ್ನ ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆ. ಸಕ್ಕರೆ ಬೆಲೆಯನ್ನು ಪ್ರತಿ ಕೆ.ಜಿ.ಗೆ 60 ರೂ.ಗೆ ಹೆಚ್ಚಿಸುವ ಬೇಡಿಕೆ, ಎಥೆನಾಲ್ ಖರೀದಿ ಪ್ರಮಾಣ ಹೆಚ್ಚಿಸುವ ಒತ್ತಾಯ ಹಾಗೂ ಪ್ರತಿ ಟನ್ ಕಬ್ಬಿಗೆ 3,600 ರೂ. ದರಕ್ಕೆ ಒಪ್ಪಿಗೆ ಸೂಚಿಸಿರುವುದು ಸರ್ಕಾರದ ತಪ್ಪು ನಿರ್ಧಾರಗಳಾಗಿವೆ ಎಂದು ಟೀಕಿಸಿದರು.

ಇತರ ರಾಜ್ಯಗಳಲ್ಲಿ ಕಬ್ಬು ಬೆಳೆಗಾರರಿಗೆ ನೀಡುತ್ತಿರುವ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಪ್ರೋತ್ಸಾಹ ಧನ ನೀಡಬೇಕು. ಡಿಸೆಂಬರ್ 2ರೊಳಗೆ ರಾಜ್ಯ ಸರ್ಕಾರ ರೈತರಿಗೆ ಪ್ರೋತ್ಸಾಹ ಧನ ಘೋಷಿಸಬೇಕು. ಇಲ್ಲದಿದ್ದರೆ ಡಿಸೆಂಬರ್ 2ರಿಂದಲೇ ಅನಿರ್ದಿಷ್ಟಾವಧಿ ಹೋರಾಟ ಆರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ ಬರ ಪರಿಹಾರದ ಹೆಸರಿನಲ್ಲಿ ರೈತರ ಖಾತೆಗಳಿಗೆ ಕೇವಲ 2,500 ರೂ. ಜಮೆ ಮಾಡಲಾಗುತ್ತಿದೆ. ಆದರೆ, ಕೇಂದ್ರ ಸರ್ಕಾರಕ್ಕೆ 60 ಸಾವಿರ ಕೋಟಿ ರೂ. ನಷ್ಟವಾಗಿದೆ ಎಂದು ರಾಜ್ಯ ಸರ್ಕಾರವೇ ವರದಿ ಸಲ್ಲಿಸಿದೆ. ಇಂತಹ ಸಂದರ್ಭದಲ್ಲಿ ಅಲ್ಪ ಪ್ರಮಾಣದ ಪರಿಹಾರ ನೀಡುವ ಮೂಲಕ ರೈತರನ್ನು ಅವಮಾನಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಬ್ಬು ಬೆಳೆಗಾರರ ವಿಚಾರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೈಗೊಂಡಿರುವ ನಿರ್ಧಾರಗಳನ್ನು ತಕ್ಷಣವೇ ಸರಿಪಡಿಸಿ, ರೈತರಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ರೈತರು ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಿ, ಸರ್ಕಾರವನ್ನೇ ವಜಾಗೊಳಿಸುವಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದ


Spread the love

About Laxminews 24x7

Check Also

ಎಥೆನಾಲ್ ವಿಚಾರದಲ್ಲಿ ದೊಡ್ಡ ಫ್ರಾಡ್ ನಡೆದಿದೆ: ಸಚಿವ ಸಂತೋಷ್ ಲಾಡ್

Spread the loveಬೆಂಗಳೂರು: ಎಥೆನಾಲ್‌ ವಿಚಾರದಲ್ಲಿ ದೊಡ್ಡ ಫ್ರಾಡ್‌ ನಡೆದಿದೆ ಎಂದು ಸಚಿವ ಸಂತೋಷ್‌ ಲಾಡ್‌ ಗಂಭೀರ ಆರೋಪ ಮಾಡಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ