Breaking News

ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಡಿಕೆಶಿ – ಜೂ.3ಕ್ಕೆ ಸಿಎಂ ಆಗಿ ಪ್ರಮಾಣವಚನರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಡಿಕೆಶಿ – ಜೂ.3ಕ್ಕೆ ಸಿಎಂ ಆಗಿ ಪ್ರಮಾಣವಚನ

Spread the love

ಬೆಂಗಳೂರು: ಲೋಕಭವನದಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರನ್ನು ಡಿ.ಕೆ.ಶಿವಕುಮಾರ್‌ ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

ಸರ್ಕಾರ ರಚಿಸಲು ರಾಜ್ಯಪಾಲರು ಡಿಕೆಶಿಗೆ ಆಹ್ವಾನ ನೀಡಿದ್ದು, ಜೂ.3 ರಂದು (ಬುಧವಾರ) ಸಾಯಂಕಾಲ 4:05 ಕ್ಕೆ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ವಿಧಾನಸೌಧದಲ್ಲಿ ಇಂದು ಸಂಜೆ ಸಿಎಲ್‌ಪಿ ಸಭೆ ನಡೆಯಿತು. ಸಭೆಯಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆದರು. ಡಿಕೆಶಿ ಹೆಸರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ಪ್ರಸ್ತಾಪಿಸಿದರು. ಜಿ.ಪರಮೇಶ್ವರ್‌ ಅನುಮೋದನೆ ನೀಡಿದರು. ಅದಕ್ಕೆ ಶಾಸಕರು ಒಪ್ಪಿಗೆ ಸೂಚಿಸಿದರು.

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ಸಿದ್ದರಾಮಯ್ಯ ಸೇರಿದಂತೆ 10 ಮಂದಿ ಕಾಂಗ್ರೆಸ್‌ ನಾಯಕರ ಜೊತೆಗೂಡಿ ಡಿಕೆಶಿ ರಾಜ್ಯಪಾಲರ ಭವನಕ್ಕೆ ತೆರಳಿದರು. ರಾಜ್ಯಪಾಲರ ಬಳಿ ಸಿಎಲ್‌ಪಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಬಗ್ಗೆ ಮಾಹಿತಿ ನೀಡಿದರು. ಬಳಿಕ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ