Breaking News

ಆ.16ಕ್ಕೆ ಕೊಡಗು ಜಿಲ್ಲೆಗೆ ಡಿಕೆಶಿ ಭೇಟಿ – ಭಾಗಮಂಡಲ, ತಲಕಾವೇರಿಯಲ್ಲಿ ವಿಶೇಷ ಪೂಜೆ

Spread the love

ಮಡಿಕೇರಿ: ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಡಿ.ಕೆ ಶಿವಕುಮಾರ್  ಅವರು ಕೊಡಗು  ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಆಗಸ್ಟ್ 16ಕ್ಕೆ ಜಿಲ್ಲೆಗೆ ಆಗಮಿಸಲಿರುವ ಡಿಕೆ ಶಿವಕುಮಾರ್ ಅವರು ಭಾಗಮಂಡಲ  ಮತ್ತು ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ತಮ್ಮ ಪ್ರವಾಸವನ್ನು ಆರಂಭಿಸಲಿದ್ದಾರೆ. ಆಗಸ್ಟ್ 16ರಂದು ಬೆಳಗ್ಗೆ 11 ಗಂಟೆಗೆ ಭಾಗಮಂಡಲ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಬಳಿಕ ಭಾಗಮಂಡಲದ ಭಗಂಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಂತರ ತಲಕಾವೇರಿಗೆ ತೆರಳಿ ಕಾವೇರಿ ತಾಯಿಗೆ ವಿಶೇಷ ಪೂಜೆ ನೆರವೇರಿಸಲಿದ್ದಾರೆ. ಬಳಿಕ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ.

ಮುಖ್ಯಮಂತ್ರಿಯಾದ ಬಳಿಕ ಡಿ.ಕೆ ಶಿವಕುಮಾರ್ ಅವರು ಕೊಡಗು ಜಿಲ್ಲೆಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ಈ ಕುರಿತು ಕಾರ್ಯಕ್ರಮದ ವಿವರವನ್ನು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಹಂಚಿಕೊಂಡಿದ್ದಾರೆ.

ಕಳೆದ ವರ್ಷದ ಮಾರ್ಚ್ 21ರಂದು ಉಪಮುಖ್ಯಮಂತ್ರಿಯಾಗಿದ್ದ ವೇಳೆ ಡಿ.ಕೆ. ಶಿವಕುಮಾರ್ ಅವರು ತಲಕಾವೇರಿಗೆ ಭೇಟಿ ನೀಡಿ, ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದ್ದರು. ಅಲ್ಲಿಂದ ಪವಿತ್ರ ಕಾವೇರಿ ತೀರ್ಥವನ್ನು ಬೆಂಗಳೂರಿಗೆ ಕೊಂಡೊಯ್ದು ಕಾವೇರಿ ಆರತಿಯಲ್ಲಿ ಬಳಸಲಾಗಿತ್ತು. ಇದೀಗ ಮುಖ್ಯಮಂತ್ರಿಯಾದ ಬಳಿಕ ಮತ್ತೊಮ್ಮೆ ಕಾವೇರಿ ನಾಡಿಗೆ ಆಗಮಿಸುತ್ತಿರುವುದು ಜಿಲ್ಲೆಯ ಜನರಲ್ಲಿ ವಿಶೇಷ ಕುತೂಹಲ ಮೂಡಿಸಿದೆ.


Spread the love

About Laxminews 24x7

Check Also

ಯಂತ್ರಕ್ಕೆ ಸಿಲುಕಿದ್ದ ಅಡುಗೆ ಸಿಬ್ಬಂದಿಯನ್ನು ರಕ್ಷಿಸಿದ ಬಾಲಕ – ಪುಟಾಣಿಯ ಸಾಹಸಕ್ಕೆ ಡಿಕೆಶಿ ಮೆಚ್ಚುಗೆ

Spread the loveಮಂಗಳೂರು: ಬಂಟ್ವಾಳದ  ನರಿಕೊಂಬು  ಗ್ರಾಮದ ಶಾಲೆಯಲ್ಲಿ ಅಡುಗೆ ಮಾಡುವಾಗ ತೆಂಗಿನ ಕಾಯಿ ತುರಿಯುವ ವಿದ್ಯುತ್ ಯಂತ್ರಕ್ಕೆ ಸಿಲುಕಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ