Home / ಜಿಲ್ಲೆ / ಕಾಂಗ್ರೆಸ್ ಭವನದಲ್ಲಿ ಆಶಾ ಕಾರ್ಯಕರ್ತೆಯರು, ದಾದಿಯರು, ಪೌರ ಕಾರ್ಮಿಕರಿಗೆ ಪಿಪಿಎ ಕಿಟ್ ವಿತರಣೆ: ಡಿ.ಕೆ ಶಿವಕುಮಾರ್

ಕಾಂಗ್ರೆಸ್ ಭವನದಲ್ಲಿ ಆಶಾ ಕಾರ್ಯಕರ್ತೆಯರು, ದಾದಿಯರು, ಪೌರ ಕಾರ್ಮಿಕರಿಗೆ ಪಿಪಿಎ ಕಿಟ್ ವಿತರಣೆ: ಡಿ.ಕೆ ಶಿವಕುಮಾರ್

Spread the love

ಬೆಂಗಳೂರು: ಜೀವನವನ್ನು ಪಣಕ್ಕಿಟ್ಟು ಕೊರೊನಾ ಸೋಂಕಿನ ವಿರುದ್ಧ ಹೋರಾಡುವ ವೈದ್ಯರಿಗೆ ಹೊರತು ಪಡಿಸಿ ಉಳಿದ ಕೆಲವರಿಗೆ ಪಿಪಿಎ ಕಿಟ್ ಸಿಗುತ್ತಿಲ್ಲ. ಹೀಗಾಗಿ ಇಂದು ಪಿಪಿಇ ಕಿಟ್ ವಿರತರಣೆ ಮಾಡುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಆಶಾ ಕಾರ್ಯಕರ್ತೆಯರು, ದಾದಿಯರು, ಪೌರ ಕಾರ್ಮಿಕರಿಗೆ ಪಿಪಿಎ ಕಿಟ್ ವಿತರಣೆ ಮಾಡಿ ಮಾತನಾಡಿದ ಅವರು, ವೈದ್ಯರನ್ನ ಹೊರತುಪಡಿಸಿ ಉಳಿದವರಿಗೆ ಪಿಪಿಎ ಕಿಟ್ ವಿತರಣೆ ಮಾಡಿದ್ದೇವೆ. ಜನ ಲಾಕ್ ಡೌನ್ ವಿನಾಯ್ತಿ ಸಿಕ್ಕಿದೆ ಅಂತ ಯಾಮಾರುವುದು ಬೇಡ ಎಂದರು.
ಸದ್ಯಕ್ಕೆ ರಾಜ್ಯದಲ್ಲಿ ಕೊರೊನಾ ಕಂಟ್ರೋಲ್ ಆಗಿರಬಹುದು. ಆದರೆ, ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ ತಮ್ಮ ಜಾಗರೂಕತೆಯಲ್ಲಿ ಎಲ್ಲರೂ ಇರಬೇಕು. ಓಡಾಡೋಕೆ ಬಿಟ್ಟಿದ್ದಾರೆ ಅಂತ ಯಾಮಾರುವುದು ಬೇಡ ಎಂದು ಸಾರ್ವಜನಿಕರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮನವಿ ಮಾಡಿದರು.
ಆಶಾ ಕಾರ್ಯಕರ್ತೆಯರ, ಪೌರ ಕಾರ್ಮಿಕರ ಆರೋಗ್ಯ ಕಾಳಜಿ ವಹಿಸಿದ ಕಾಂಗ್ರೆಸ್ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Spread the love

About Laxminews 24x7

Check Also

ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆ

Spread the loveಬೆಂಗಳೂರು : ಈ ಸಂಬಂಧ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಮುಖ್ಯಮಂತ್ರಿಗಳ ದಿನಾಂಕ 24-01-2022ರ ಟಿಪ್ಪಣಿಯಂತೆ ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ