Breaking News

24 ಗಂಟೆಯಲ್ಲಿ ದಾಖಲೆಯ 613 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 19,268ಕ್ಕೆ ಏರಿಕೆಯಾಗಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ.

Spread the love

ಹೊಸದಿಲ್ಲಿ: ದೇಶದಲ್ಲಿ ಕೊರೊನಾ ರಣಕೇಕೆ ಮುಂದುವರೆದಿದ್ದು, ಒಂದೇ ದಿನ ದಾಖಲೆಯ 24,850 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 6,73,165ಕ್ಕೆ ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.

ಕಳೆದ 24 ಗಂಟೆಯಲ್ಲಿ ದಾಖಲೆಯ 613 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 19,268ಕ್ಕೆ ಏರಿಕೆಯಾಗಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ.

ಇನ್ನು 6,73,165 ಮಂದಿ ಸೋಂಕಿತರ ಪೈಕಿ 4,09,083 ಮಂದಿ ಗುಣಮುಖರಾಗಿದ್ದು, ಪ್ರಸ್ತುತ ಇನ್ನೂ ರಾಷ್ಟ್ರದಲ್ಲಿ 2,44,814 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ.

ಸೋಂಕು ಇದೇ ಗತಿಯಲ್ಲಿ ಮುಂದುವರೆಸಿದ್ದೇ ಆದರೆ, ರಷ್ಯಾವನ್ನು ಹಿಂದಿಕ್ಕಿ ಭಾರತ ವಿಶ್ವದಲ್ಲಿಯೇ ಮೂರನೇ ಸ್ಥಾನಕ್ಕೆ ಏರುವುದು ನಿಶ್ಚಿತವಾಗಿದೆ.

i

ಪ್ರಸ್ತುತ 29 ಲಕ್ಷ ಪ್ರಕರಣಗಳೊಂದಿಗೆ ಅಮೆರಿಕಾ ಮೊದಲ ಸ್ಥಾನ ಮತ್ತು 15 ಲಕ್ಷಕ್ಕೂ ಅಧಿಕ ಪ್ರಕರಣಗಳೊಂದಿಗೆ ಬ್ರೆಜಿಲ್ ಎರಡನೇ ಸ್ಥಾನ ಪಡೆದುಕೊಂಡಿದೆ. ರಷ್ಯಾ 6.74 ಲಕ್ಷ ಪ್ರಕರಣಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದು, ಭಾರತದಲ್ಲಿ ನಾಲ್ಕನೇ ಸ್ಥಾನದಲ್ಲಿದೆ.


Spread the love

About Laxminews 24x7

Check Also

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ

Spread the loveಬೆಂಗಳೂರು: ರಾಮ ಮಂದಿರ ದೇಣಿಗೆ ಹಗರಣವನ್ನು ಬಿಜೆಪಿ ಮುಚ್ಚಿ ಹಾಕೋಕೆ ಪ್ರಯತ್ನ ಮಾಡ್ತಿದೆ ಅಂತ ಗೃಹ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ