Home / ಅಂತರಾಷ್ಟ್ರೀಯ / ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ನಾಗಾಲೋಟದಲ್ಲಿ ಏರಿಕೆಯಾಗುತ್ತಿದೆ.

ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ನಾಗಾಲೋಟದಲ್ಲಿ ಏರಿಕೆಯಾಗುತ್ತಿದೆ.

Spread the love

ನವದೆಹಲಿ: ವಿಶ್ವದೆಲ್ಲೆಡೆ ಕೊರೋನಾ ಆರ್ಭಟ ಹೆಚ್ಚಾಗುತ್ತಿರುವ ನಡುವೆಯೇ ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ನಾಗಾಲೋಟದಲ್ಲಿ ಏರಿಕೆಯಾಗುತ್ತಿದೆ. ಕಳೆದ ಕೆಲ ದಿನಗಳಿಂದ ಚಿನ್ನ ಮತ್ತು ಬೆಳ್ಳಿಯ ಬೆಲೆ ನಿರಂತರವಾಗಿ ಹೆಚ್ಚಾಗುತ್ತಲೇ ಇದೆ. ಇಂದು 10 ಗ್ರಾಂ ಚಿನ್ನದ ಬೆಲೆ 47,950 ರೂನಿಂದ 47,960 ರೂಪಾಯಿಗೆ ಏರಿಕೆಯಾಗಿದೆ. ಇದೇ ವೇಳೆ ಬೆಳ್ಳಿ ದರದಲ್ಲಿ ಕೂಡ ಏರಿಕೆ ಕಂಡಿದ್ದು, 1 ಕೆ.ಜಿ ಬೆಳ್ಳಿಗೆ 48,670 ರೂಪಾಯಿ ಆಗಿದೆ. ಈ ಮೂಲಕ ದೇಶಾದ್ಯಂತ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅಬಕಾರಿ ಸುಂಕ, ರಾಜ್ಯ ತೆರಿಗೆಗಳು ಮತ್ತು ಶುಲ್ಕ ವಿಧಿಸುವಿಕೆಯಿಂದಾಗಿ

ಭಾರತದಾದ್ಯಂತ ಚಿನ್ನಾಭರಣಗಳ ಬೆಲೆಗಳು ಬದಲಾಗುತ್ತಿವೆ ಎಂದು ತಿಳಿದು ಬಂದಿದೆ.  ಜಾಗತಿಕ ಮಾರುಕಟ್ಟೆಯಲ್ಲಿ  ಒಂದು ಔನ್ಸ್​ ಚಿನ್ನದ ಬೆಲೆ 1729 ಡಾಲರ್​​​ನಷ್ಟಿದೆ. ಇನ್ನು, ಒಂದು ಔನ್ಸ್​ ಬೆಳ್ಳಿಯ ಬೆಲೆ 17.49 ಡಾಲರ್​​​ನಷ್ಟಿದೆ.


Spread the love

About Laxminews 24x7

Check Also

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Spread the love ಬೆಂಗಳೂರು/ಹೊಸದಿಲ್ಲಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಜೈಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ