Breaking News
Home / new delhi / ಅರ್ಜಿ ಹಾಕಿದ್ದ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್: 1,40 ಲಕ್ಷ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಶುರು

ಅರ್ಜಿ ಹಾಕಿದ್ದ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್: 1,40 ಲಕ್ಷ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಶುರು

Spread the love

ನವದೆಹಲಿ, : ಭಾರತೀಯ ರೈಲ್ವೆಯಲ್ಲಿನ ನೇಮಕಾತಿ ಪ್ರಕ್ರಿಯೆ ಡಿಸೆಂಬರ್ 15ರಿಂದ ಮೊದಲ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳನ್ನು ನಡೆಸಲು ಪ್ರಾರಂಭಿಸಲಿದೆ.

ಈ ಕುರಿತು ರಾಷ್ಟ್ರೀಯ ಸಾರಿಗೆ ಮಂಡಳಿಯ ಅಧ್ಯಕ್ಷ ವಿ.ಕೆ. ಯಾದವ್ ತಿಳಿಸಿದ್ದಾರೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 1,40,640 ಹುದ್ದೆಗಳಿಗೆ ಕೊರೋನಾ ಭೀತಿ ಶುರುವಾಗುವ ಮುನ್ನ ಅರ್ಜಿ ಆಹ್ವಾನಿಸಲಾಗಿತ್ತು.

ಬಳಿಕ ಕೊರೋನಾ ಸಂಕಷ್ಟದಿಂದಾಗಿ ಈ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಸ್ಥಗಿತವಾಗಿತ್ತು. ಇದೀಗ ಅವುಗಳ ನೇಮಕಾತಿ ಪ್ರಕ್ರಿಯೆ ಇದೇ ಡಿ.15ರಿಂದ ಆರಂಭವಾಗಲಿದೆ.

ಅಂಚೆ ಇಲಾಖೆಯಲ್ಲಿ ನೇಮಕಾತಿ: ವಿದ್ಯಾರ್ಹತೆ 10ನೇ ತರಗತಿ

1,40,640 ಹುದ್ದೆಗಳಿಗೆ 2.42 ಕೋಟಿ ಅರ್ಜಿಗಳು ಬಂದಿವೆ. ಈ ಅರ್ಜಿಗಳನ್ನು ಮುಂದಿನ ಹಂತಕ್ಕಾಗಿ ಈಗಾಗಲೇ ಅಂತಿಮಗೊಳಿಸಲಾಗಿದೆ.

ವಿ.ಕೆ.ಯಾದವ್ ಮಾಹಿತಿ ನೀಡಿದ್ದಾರೆ.

ಗಾರ್ಡ್​, ಕ್ಲರ್ಕ್​, ಟ್ರ್ಯಾಕ್​ ನಿರ್ವಹಣಕಾರ, ಪಾಯಿಂಟ್ಸ್​ಮೆನ್​ಗ ಹುದ್ದೆಗಳಿನ್ನು ಇದು ಒಳಗೊಂಡಿದೆ. ಈ ಕುರಿತು ರೈಲ್ವೆ ಸಚಿವ ಪಿಯೂಷ್​ ಗೋಯಲ್​ ಕೂಡ ಟ್ವಿಟರ್‌ ಮೂಲಕ ಮಾಹಿತಿ ನೀಡಿದ್ದಾರೆ. ಸಂಪೂರ್ಣ ಮಾಹಿತಿಯನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ.


Spread the love

About Laxminews 24x7

Check Also

ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Spread the loveಬೆಂಗಳೂರು: ವಿವಾಹಿತ ಮಹಿಳೆಯನ್ನು ಮದುವೆಯಾಗುವಂತೆ ಪೀಡಿಸಿದಲ್ಲದೆ, ಅದನ್ನು ನಿರಾಕರಿಸಿದಕ್ಕೆ ಆಕೆಯ ಮನೆಗೆ ಬೆಂಕಿ ಇಟ್ಟ ಆರೋಪಿಯನ್ನು ಸಂಪಿಗೆಹಳ್ಳಿ ಠಾಣೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ