Breaking News

ಪ್ರಧಾನಿ ಮೋದಿ 70ನೇ ಹುಟ್ಟುಹಬ್ಬದ ಸಂಭ್ರಮ : ನೇಪಾಳ, ರಷ್ಯಾ ಅಧ್ಯಕ್ಷರಿಂದ ಶುಭಾಶಯ

Spread the love

ನವದೆಹಲಿ: ಇಂದು ಭಾರತದ ಪ್ರಧಾನಿ ನರೇಂದ್ರ ಮೋದಿಯವರು 70ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ನೇಪಾಳ, ರಷ್ಯಾ ಅಧ್ಯಕ್ಷರು ಸೇರಿದಂತೆ ಬಹುತೇಕ ದೇಶದ ನಾಯಕರು ಶುಭಾಶಯ ತಿಳಿಸಿದ್ದಾರೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಧಾನಿಗೆ ಪತ್ರ ಬರೆದು ಪ್ರಧಾನಮಂತ್ರಿಯಾಗಿ ನೀವು ಮಾಡಿದ ಸಾಧನೆಯೂ ಅಂತಾರಾಷ್ಟ್ರೀಯ ಗೌರವಕ್ಕೆ ಅರ್ಹ. ನಿಮ್ಮ ನಾಯಕತ್ವದಲ್ಲಿ ಭಾರತ ಆರ್ಥಿಕ, ಸಾಮಾಜಿಕ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿ ಅದ್ಭುತ ಸಾಧನೆ ಮಾಡಿದೆ. ಭಾರತ ಮತ್ತು ರಷ್ಯಾ ಭಾಂದವ್ಯ ವೃದ್ದಿಸಲು ಕಾರಣರಾದ ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಹೇಳಿದ್ದಾರೆ. ಜೊತೆಗೆ ಈ ಹುಟ್ಟುಹಬ್ಬದ ಸಂದರ್ಭದಲ್ಲಿ ಆರೋಗ್ಯವಂತರಾಗಿ, ಸಂತೋಷದಿಂದ ದೀರ್ಘಕಾಲ ಬಾಳಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.

ನೇಪಾಳದ ಪ್ರಧಾನಿ ಕೆ.ಪಿ.ಶರ್ಮಾ ಒಲಿಯವರು ಶುಭಾಶಯ ಕೋರಿದ್ದು, ಜನ್ಮದಿನದ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜಿ ಅವರಿಗೆ ಆತ್ಮೀಯ ಶುಭಾಶಯಗಳು. ನಾನು ನಿಮ್ಮ ಸಂತೋಷ ಹಾಗೂ ಉತ್ತಮ ಆರೋಗ್ಯವನ್ನು ಬಯಸುತ್ತೇನೆ. ಉಭಯ ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟು ಬಲಪಡಿಸಲು ಜೊತೆಯಾಗಿ ದುಡಿಯೋಣ ಎಂದು ತಿಳಿಸಿದ್ದಾರೆ.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ