Breaking News

ಪ್ರಧಾನಿ ಮೋದಿ ಭಾವಚಿತ್ರ ಹಚ್ಚೆ ಹಾಕಿಸಿಕೊಂಡ ಮಹಿಳೆ

Spread the love

ಪಿರಿಯಾಪಟ್ಟಣ : ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ ಅಂಗವಾಗಿ ಪಟ್ಟಣದ ಮಹಿಳಾ ಅಭಿಮಾನಿಯೊಬ್ಬರು ಅವರ ಎಡಗೈ ಮೇಲೆ ಮೋದಿ ಅವರ ಭಾವಚಿತ್ರದ ಹಚ್ಚೆ ಹಾಕಿಸಿ ಅಭಿಮಾನ ತೋರಿದ್ದಾರೆ.

ಹಲವು ಸಾಮಾಜಿಕ ಚಟುವಟಿಕೆ ಮೂಲಕ ಗುರುತಿಸಿಕೊಂಡಿರುವ ಪಟ್ಟಣದ ನಿವಾಸಿ ಶುಭಾಗೌಡ ಹಚ್ಚೆ ಹಾಕಿಸಿಕೊಂಡವರು.

ನರೇಂದ್ರ ಮೋದಿ ಅವರು ದೇಶದ ಪ್ರಧಾನ ಮಂತ್ರಿಯಾದಾಗಿನಿಂದ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದು ಭಾರತವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ದು, ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದಾರೆ.

ಮೋದಿ ಬರ್ತಡೇ ಸಂಭ್ರಮದಲ್ಲಿ ಹೀಲಿಯಂ ಬಲೂನ್‌ಗಳು ಬ್ಲಾಸ್ಟ್; ಮುಂದೇನಾಯ್ತು? ನೋಡಿ! …

ಹಿಂದುತ್ವದ ಬಗೆಗಿನ ಅವರ ಅಪಾರ ಕಾಳಜಿ ಕಂಡು ಅವರ ದೊಡ್ಡ ಅಭಿಮಾನಿಯಾಗಿ ಹುಟ್ಟುಹಬ್ಬದಂದು ಪ್ರಧಾನಿಯವರ ಭಾವಚಿತ್ರ ಹಚ್ಚೆ ಹಾಕಿಸಿಕೊಂಡಿರುವುದಾಗಿ ಶುಭಗೌಡ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನವನ್ನು ಸೆಪ್ಟೆಂಬರ್ 17 ರಂದು ಆಚರಣೆ ಮಾಡಲಾಗಿದ್ದು, ಈ ವೇಳೆ ಹಲವರು ತಮ್ಮ ಅಭಿಮಾನ ಮೆರೆದಿದ್ದು, ವಿವಿಧ ರೀತಿಯಲ್ಲಿ ಜನ್ಮ ದಿನ ಆಚರಣೆ ಮಾಡಲಾಯಿತು.


Spread the love

About Laxminews 24x7

Check Also

ಚಿನ್ನಸ್ವಾಮಿ ಕಾಲ್ತುಳಿತ ಘಟನೆಗೆ ಆಯೋಜಕರು ಹೆಚ್ಚಿನ ಕಾರಣೀಕರ್ತರಾಗಿದ್ದಾರೆ: ಸಚಿವ ಜಿ.ಪರಮೇಶ್ವರ್

Spread the loveಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಘಟನೆಗೆ ಆಯೋಜನೆ ಮಾಡಿದವರು ಹೆಚ್ಚಿನ ಕಾರಣೀಕರ್ತರಾಗಿದ್ದಾರೆ ಎಂದು ಗೃಹ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ