Breaking News

ಭಾರತದ ಸಹಭಾಗಿಗಳೊಂದಿಗೆ ಭಾಗಿಯಾಗಲಿದ್ದಾರೆ.

Spread the love

ದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕಲ್‌ ಆರ್‌. ಪಾಂಪಿಯೋ ಅಕ್ಟೋಬರ್ 25 ರಿಂದ 30 ರವರೆಗೆ ಭಾರತದ ನವದೆಹಲಿ, ಶ್ರೀಲಂಕಾದ ಕೊಲೊಂಬೊ, ಮಾಲ್ಡೀವ್ಸ್‌ನ ಮಾಲೆ ಮತ್ತು ಇಂಡೋನೇಷ್ಯಾದ ಜಕಾರ್ತಕ್ಕೆ ಭೇಟಿ ನೀಡಲಿದ್ದಾರೆ.

ಕಾರ್ಯದರ್ಶಿ ಪಾಂಪಿಯೋ ಮತ್ತು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಮಾರ್ಕ್‌ ಟಿ. ಎಸ್ಪರ್‌ ನವದೆಹಲಿಯಲ್ಲಿ ನಡೆಯಲಿರುವ ಮೂರನೇ ವಾರ್ಷಿಕ ಅಮೆರಿಕ-ಭಾರತ 2+2 ಸಚಿವರ ಮಟ್ಟದ ಮಾತುಕತೆಯಲ್ಲಿ ಭಾರತದ ಸಹಭಾಗಿಗಳೊಂದಿಗೆ ಭಾಗಿಯಾಗಲಿದ್ದಾರೆ. ಈ ಸಂದರ್ಭದಲ್ಲಿ ಅಮೆರಿಕ- ಭಾರತದ ನಡುವಿನ ಸಮಗ್ರ ಜಾಗತಿಕ ವ್ಯೂಹಾತ್ಮಕ ಸಹಭಾಗಿತ್ವ ಮತ್ತು ವಿಶ್ವಾದ್ಯಂತ ಹಾಗೂ ಇಂಡೋ-ಪೆಸಿಪಿಕ್‌ ಪ್ರಾಂತ್ಯದಲ್ಲಿ ಸ್ಥಿರತೆ ಸಮೃದ್ಧಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಚರ್ಚೆ ನಡೆಯಲಿದೆ.

ಮೈಕ್​ ಪಾಂಪಿಯೋ ತಮ್ಮ ಕೊಲೊಂಬೊ ಭೇಟಿಯ ಸಂದರ್ಭದಲ್ಲಿ, ಅಮೆರಿಕ ಮತ್ತು ಶ್ರೀಲಂಕಾಗಳ ಸಹಭಾಗಿತ್ವದಲ್ಲಿ ಮುಕ್ತ ಇಂಡೋ-ಪೆಸಿಫಿಕ್‌ ಪ್ರದೇಶ ಹೊಂದುವ ಸಮಾನ ಗುರಿಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಲಿದ್ದಾರೆ.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ: 8123967576
Laxmi News

 


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ