ನವದೆಹಲಿ, : ಕೊರೆಯುವ ಚಳಿಯ ನಡುವೆಯೇ ಕೇಂದ್ರ ಸರ್ಕಾರದ ವಿರುದ್ಧ ನಡೆಸುತ್ತಿರುವ ಹೋರಾಟವನ್ನು ರೈತರು ಮುಂದುವರೆಸಿದ್ದಾರೆ. ದೆಹಲಿ-ಹರ್ಯಾಣದ ಸಿಂಘು ಗಡಿಯಲ್ಲಿ ಪೊಲೀಸರು ರೈತರನ್ನು ತಡೆದಿದ್ದಾರೆ.
ರೈತರು ದೆಹಲಿಯ ಬುರಾಡಿ ಮೈದಾನಕ್ಕೆ ಬಂದರೆ ಅವರ ಜೊತೆ ಮಾತುಕತೆ ನಡೆಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು. ಆದರೆ, ಪ್ರತಿಭಟನೆ ನಡೆಸುತ್ತಿರುವ ರೈತರು ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ.
ಬೆಳಗ್ಗೆ 11ಗಂಟೆಗೆ ಮುಂದಿನ ಹೋರಾಟದ ಬಗ್ಗೆ ರೈತರು ಸಭೆ ನಡೆಸಲಿದ್ದಾರೆ. ದೆಹಲಿ ಪ್ರವೇಶ ಮಾಡುವ ಎಲ್ಲಾ 5 ಪ್ರವೇಶ ದ್ವಾರವನ್ನು ಬಂದ್ ಮಾಡುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ. ರೈತರು ದೆಹಲಿಯ ಮಧ್ಯಭಾಗದಕ್ಕೆ ಬರದಂತೆ ತಡೆಯುವ ಪ್ರಯತ್ನಗಳು ನಡೆಯುತ್ತಿವೆ.
ಪಂಜಾಬ್ ಮತ್ತು ಹರ್ಯಾಣ ರಾಜ್ಯದ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಹಲವಾರು ಜನರು, ಸಂಘಟನೆಗಳು ಬೆಂಬಲ ನೀಡಿವೆ. ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರು ಹೋರಾಟವನ್ನು ನಡೆಸುತ್ತಿದ್ದಾರೆ.