Breaking News

ಅನ್ನದಾತರ ಹೋರಾಟಕ್ಕೆ ಅಣ್ಣಾ ಹಜಾರೆ ಬೆಂಬಲ

Spread the love

ಪುಣೆ: ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಮಂಗಳವಾರ ದಿನವಿಡೀ ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ಕೇಂದ್ರದ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ರಾಷ್ಟ್ರವ್ಯಾಪಿ ಹೋರಾಟ ಹಾಗೂ ‘ಭಾರತ್ ಬಂದ್’ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರದ ಅಹಮದ್‍ನಗರ್ ಜಿಲ್ಲೆಯ ರಾಳೆಗಾಂವ್ ಸಿದ್ದಿ ಗ್ರಾಮದಲ್ಲಿ ಮಂಗಳವಾರ ಉಪವಾಸ ಸತ್ಯಾಗ್ರಹ ಆರಂಭಿಸಿದ ಅಣ್ಣಾ ಹಜಾರೆ, ‘ಕೃಷಿಕರ ಹಿತಾಸಕ್ತಿಗೆ ಅನುಗುಣವಾಗಿ ಕಾರ್ಯನಿರ್ವಹಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವ ನಿಟ್ಟಿನಲ್ಲಿ, ಈ ಆಂದೋಲನ ದೇಶವ್ಯಾಪಿ ನಡೆಯಬೇಕು’ ಎಂದು ಹೇಳಿದರು.

‘ಸರ್ಕಾರರಗಳು ಭರವಸೆಗಳನ್ನು ಮಾತ್ರ ನೀಡಿದವು. ಆದರೆ ರೈತರ ಬೇಡಿಕೆಗಳನ್ನು ಎಂದಿಗೂ ಈಡೇರಿಸಲಿಲ್ಲ’ ಎಂದು ಆರೋಪಿಸಿದ ಹಜಾರೆಯವರು, ‘ದೆಹಲಿಯಲ್ಲಿ ನಡೆಯುತ್ತಿರುವ ಈ ಆಂದೋಲನವು ದೇಶಾದ್ಯಂತ ವಿಸ್ತರಿಸಬೇಕೆಂದು ದೇಶದ ಜನರಲ್ಲಿ ನಾನು ಮನವಿ ಮಾಡುತ್ತಿದ್ದೇನೆ’ ಎಂದರು.

 

 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ