ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಪೆÇಲೀಸರು ಗೃಹ ಬಂಧನದಲ್ಲಿರಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿ ವಕ್ತಾರ ಸೌರಭ್ ಭಾರದ್ವಾಜ್, ದೆಹಲಿ ಪೆÇಲೀಸರು ಕೇಜ್ರೀವಾಲ್ ಅವರನ್ನು ಗೃಹಬಂಧನದಲ್ಲಿ ಇರಿಸಿದೆ. ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ದೆಹಲಿ ಪೆÇಲೀಸರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಂಗ್ಯೂ ಬಾರ್ಡರ್ ನಲ್ಲಿ ರೈತರನ್ನು ಭೇಟಿ ಮಾಡಿದ ನಂತರ ಗೃಹ ಬಂಧನದಲ್ಲಿರಿಸಲಾಗಿದೆ.
ಅವರ ನಿವಾಸಕ್ಕೆ ತೆರಳಲು ಅಥವಾ ಒಳಗೆ ಹೋಗಲು ಯಾರಿಗೂ ಅನುಮತಿ ನೀಡಿಲ್ಲ. ಭಾರಿ ಬ್ಯಾರಿಕೇಡ್ ಗಳಿದ್ದು, ಮನೆ ಕೆಲಸದಾಳು ಕೂಡ ಮನೆಯೊಳಗೆ ಪ್ರವೇಶ ನೀಡುತ್ತಿಲ್ಲ’ ಎಂದು ಅವರು ಆರೋಪಿಸಿದರು
.