ಹೊಸದಿಲ್ಲಿ : ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮೇ 29ರಂದು ಚುನಾವಣೆ ನಡೆಸುವ ಪ್ರಸ್ತಾವವನ್ನು ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಮುಂದಿಟ್ಟಿದೆ.
ಇದೇ ದಿನವೇ ಎಐಸಿಸಿ ಅಧಿವೇಶನ ನಡೆಸಲು ಉದ್ದೇಶಿಸಲಾಗಿದೆ. ಈ ಎರಡು ವಿಷಯಗಳ ಬಗ್ಗೆ ಕಾಂಗ್ರೆಸ್ ಕಾರ್ಯಕಾರಿ (ಸಿಡಬ್ಲ್ಯೂಸಿ) ಸಮಿತಿ ಸಭೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ.
ಸಭೆಯಲ್ಲಿ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಕೃಷಿ ಕಾಯ್ದೆಗಳು ಹಾಗೂ ರೈತರ ಪ್ರತಿಭಟನೆ, ಸಂಸತ್‌ನ ಬಜೆಟ್ ಅಧಿವೇಶನದಲ್ಲಿ ಪಕ್ಷದ ಕಾರ್ಯತಂತ್ರ ಮುಂತಾದ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಾಗುತ್ತಿದೆ.
Laxmi News 24×7