ನವದೆಹಲಿ ; ಮುಂದಿನ ಮಾರುಕಟ್ಟೆ ವರ್ಷದಲ್ಲಿ ಕಬ್ಬು ಬೆಳೆಗಾರರಿಗೆ ಪಾವತಿಸುವ ಕನಿಷ್ಠ ಬೆಲೆಯನ್ನು ಸಕ್ಕರೆ ಕಾರ್ಖಾನೆಗಳಿಗೆ ಕ್ವಿಂಟಲ್‌ಗೆ 10 ರೂ.ದಿಂದ 285 ರೂ.ಗೆ ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಈ ಬಗ್ಗೆ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ಕಬ್ಬಿನ ಎಫ್‌ಆರ್‌ಪಿಯನ್ನು ಕ್ವಿಂಟಲ್‌ಗೆ 10 ರೂ. ಹೆಚ್ಚಿಸುವ ಆಹಾರ ಸಚಿವಾಲಯದ ಪ್ರಸ್ತಾವವನ್ನು ಸಿಸಿಇಎ ಅಂಗೀಕರಿಸಿದೆ. ಇದು ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ (ಸಿಎಸಿಪಿ) ಶಿಫಾರಸಿಗೆ ಅನುಗುಣವಾಗಿದೆ. ಕಬ್ಬು (ನಿಯಂತ್ರಣ) ಆದೇಶ, 1966ರ ಅಡಿ ಎಫ್‌ಆರ್‌ಪಿಯು ಸಕ್ಕರೆ ಕಾರ್ಖಾನೆಗಳು ಕಬ್ಬಿನ ರೈತರಿಗೆ ಪಾವತಿಸಬೇಕಾದ ಕನಿಷ್ಠ ಬೆಲೆಯಾಗಿದೆ.