Breaking News

ಡಿಎಂಕೆ, ಎಐಎಡಿಎಂಕೆ ಮೈತ್ರಿ – ನಾವು ತಟಸ್ಥವಾಗಿದ್ದೇವೆ, ಬೆಂಬಲ ನೀಡಲ್ಲ: ತಮಿಳುನಾಡು ಬಿಜೆಪಿ

Spread the love

ಚೆನ್ನೈ: ಡಿಎಂಕೆ ಮತ್ತು ಎಐಎಡಿಎಂಕೆ ಮಧ್ಯೆ ಮೈತ್ರಿ ಸುಳಿವು ಬೆನ್ನಲ್ಲೇ ತಮಿಳುನಾಡು ಬಿಜೆಪಿ  ತಟಸ್ಥವಾಗಿರಲು ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ತಮಿಳುನಾಡು ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿ, ಯಾವ ಪಕ್ಷದ ಜೊತೆಗೂ ನಾವು ಕೈ ಜೋಡಿಸುವುದಿಲ್ಲ. ಯಾರ ಜೊತೆಗೂ ಸೇರಿ ಸರ್ಕಾರ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

ಯಾರಾದರೂ ಸರ್ಕಾರ ರಚನೆಗೆ ಮುಂದಾದರೂ ಕೂಡ, ಆ ಪಕ್ಷದ ಜೊತೆ ನಾವು ಹೋಗುವುದಿಲ್ಲ ಎಂದು ಸಂದೇಶ ರವಾನಿಸಿದ್ದಾರೆ. ಈ ಮೂಲಕ ಡಿಎಂಕೆ-ಎಐಡಿಎಂಕೆ ಮೈತ್ರಿ ರಚನೆಗೂ ಮುನ್ನವೇ ಸರ್ಕಾರದಿಂದ ಬಿಜೆಪಿ ಎಕ್ಸಿಟ್‌ ಆಗಿದೆ.

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡು ಬಿಜೆಪಿ ಈ ಬಾರಿ ಒಟ್ಟು 27 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು. ನೀಲಗಿರಿ ಜಿಲ್ಲೆಯ ಉದಕಮಂಡಲಂ ಕ್ಷೇತ್ರದಿಂದ ಸ್ಪರ್ಧಿಸಿದ್ದ ಭೋಜರಾಜನ್ ಎಂ. ಅವರು ಬಿಜೆಪಿಯಿಂದ ಗೆದ್ದ ಏಕೈಕ ಅಭ್ಯರ್ಥಿಯಾಗಿದ್ದಾರೆ.

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್ (ಸತ್ತೂರು), ಕೇಂದ್ರ ಸಚಿವ ಎಲ್. ಮುರುಗನ್ (ಅವನಾಶಿ) ಮತ್ತು ತಮಿಳಿಸೈ ಸೌಂದರರಾಜನ್ (ಮೈಲಾಪೂರ್) ಸೇರಿದಂತೆ ಹಲವು ಹಿರಿಯ ನಾಯಕರು ಈ ಚುನಾವಣೆಯಲ್ಲಿ ಸೋಲನುಭವಿಸಿದ್ದಾರೆ.


Spread the love

About Laxminews 24x7

Check Also

ವಿಧಾನ ಪರಿಷತ್‌ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ

Spread the love ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಇಂದು ಸಲೀಂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ