Breaking News

​ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಡಿ: ರಾಜ್ಯ ಸರ್ಕಾರಕ್ಕೆ ಬೊಮ್ಮಾಯಿ ಆಗ್ರಹ

Spread the love

ನವದೆಹಲಿ: ಕರ್ನಾಟಕದಲ್ಲಿ ಪ್ರಸ್ತುತ ಕುಡಿಯುವ ನೀರಿಗೆ ಮಾತ್ರ ಸಾಲುವಷ್ಟು ನೀರಿದ್ದು, ಯಾವುದೇ ಕಾರಣಕ್ಕೂ ತಮಿಳುನಾಡಿಗೆ  ಕಾವೇರಿ ನೀರನ್ನು ಹರಿಸಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

​ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರದ ಪರವಾಗಿ ವಾದ ಮಂಡಿಸುತ್ತಿರುವ ಕಾನೂನು ತಂಡ ಮತ್ತು ಪ್ರಾಧಿಕಾರಗಳಲ್ಲಿನರಾಜ್ಯದ ಪ್ರಾತಿನಿಧ್ಯ ತೀರಾ ದುರ್ಬಲವಾಗಿದೆ ಎಂದು ವಾಗ್ದಾಳಿ ನಡೆಸಿದರು.

​ಕುಡಿಯುವ ನೀರಿಗಷ್ಟೇ ಲಭ್ಯ
ನಮ್ಮ ಜಲಾಶಯಗಳಲ್ಲಿ ಪ್ರಸ್ತುತ ಇರುವ ನೀರು ಕರ್ನಾಟಕದ ಕುಡಿಯುವ ನೀರಿನ ಅಗತ್ಯಗಳಿಗೆ ಮಾತ್ರ ಸಾಕಾಗುತ್ತದೆ. ಹೀಗಾಗಿ ಬೇರೆ ಉದ್ದೇಶಗಳಿಗೆ ನೀರು ಬಳಕೆ ಮಾಡುತ್ತಿಲ್ಲ. ಇಂತಹ ಸಂದರ್ಭದಲ್ಲಿ ತಮಿಳುನಾಡು ನೀರು ಬಿಡುವಂತೆ ಒತ್ತಡ ಹೇರುತ್ತಿದೆ. ಇದು ದೀರ್ಘ ಕಾಲದ ಪ್ರಕರಣವಾಗಿದ್ದರೂ ​ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ರಾಜ್ಯದ ನೈಜ ಪರಿಸ್ಥಿತಿಯನ್ನು ಬಲವಾಗಿ ಮಂಡಿಸುವಲ್ಲಿ ರಾಜ್ಯದ ಪ್ರತಿನಿಧಿಗಳು ವಿಫಲರಾಗಿದ್ದಾರೆ. ಇದೇ ಕಾರಣಕ್ಕೆ ತಮಿಳುನಾಡು ಪದೇ ಪದೇ ನೀರಿಗಾಗಿ ಒತ್ತಡ ಹೇರುತ್ತಿದೆ. ಈ ಕುರಿತು ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಜೊತೆಗೆ ಮಾತನಾಡಿದೆ, ಅವರೂ ಇದೇ ಅಭಿಪ್ರಾಯ ಹೊಂದಿದ್ದಾರೆ ಎಂದು ಅವರು ಹೇಳಿದರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ