Breaking News

ವರದಕ್ಷಿಣೆ ಕಿರುಕುಳ – ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್

Spread the love

ಬೆಳಗಾವಿ: ವರದಕ್ಷಿಣೆ  ಕಿರುಕುಳಕ್ಕೆ ಬೇಸತ್ತು ಗೃಹಿಣಿ  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಜ್ಯೋತಿ ನಗರದಲ್ಲಿ ನಡೆದಿದೆ.

ಶ್ರೀನಿಧಿ ಸಂತೋಷ್ ನಾವಿ (28) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಶ್ರೀನಿಧಿ ಹಾಗೂ ಸಂತೋಷ್ 2021ರಲ್ಲಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮುದ್ದಾದ ಮಕ್ಕಳಿದ್ದಾರೆ. ಗಂಡ, ಹೆಂಡತಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಕೌಟುಂಬಿಕ ಕಲಹ, ಕಿರುಕುಳಕ್ಕೆ ಬೇಸತ್ತು ಮನೆಯ ಮೊದಲ ಮಹಡಿಯಲ್ಲಿ ಕಿಟಿಕಿ ಗ್ರಿಲ್‌ಗೆ ವೇಲ್ ಬಿಗಿದುಕೊಂಡು ನೇಣಿಗೆ ಶರಣಾಗಿದ್ದಾರೆ.

ತವರು ಮನೆಯವರೊಂದಿಗೆ ಮಾತನಾಡಬಾರದೆಂದು ಮೊಬೈಲ್ ಫೋನ್ ಕಿತ್ತುಕೊಂಡಿದ್ದ ಎಂದು ಶ್ರೀನಿಧಿ ಕುಟುಂಬಸ್ಥರು ಆರೋಪಿಸಿದ್ದಾರೆ. ಗಂಡ, ಅತ್ತೆ ಹಾಗೂ ಇನ್ನಿಬ್ಬರೂ ಸಂಬಂಧಿಕರ ವಿರುದ್ಧ ಶ್ರೀನಿಧಿ ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ದೂರು ನೀಡಿದ್ದಾರೆ. ಘಟನೆ ಸಂಬಂಧ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ